ಬ್ಲಾಕ್ ಫಂಗಸ್ : ಬೆಂಗಳೂರಿನಲ್ಲಿ ಒಟ್ಟು ಮೃತರ ಸಂಖ್ಯೆ 87ಕ್ಕೆ ಏರಿಕೆ
ಬೆಂಗಳೂರು: ಒಂದೆಡೆ ಕೊರೊನಾ ಹಾವಳಿ , ಮತ್ತೊಂದೆ ತೀವ್ರಗೊಳ್ತಿರುವ ಡೆಲ್ಟಾ ಪ್ಲಸ್ , ಇದೆಲ್ಲದರ ನಡುವೆ ಬ್ಲಾಕ್ ಫಂಗಸ್ ಕಾಟ ಶುರುವಾಗಿದೆ.. ಕಪ್ಪು ಶಿಲೀಂದ್ರದ ಅಟ್ಟಹಾಸಕ್ಕೆ ಒಂದೇ ವಾರದಲ್ಲಿ 6 ಮಂದಿ ಮೃತಪಟ್ಟಿದ್ದು, ಈವರೆಗೆ ಸಾವಿಗೀಡಾದವರ ಒಟ್ಟು ಸಂಖ್ಯೆ 87ಕ್ಕೆ ಏರಿಕೆಯಾಗಿದೆ.
ಹೊಸದಾಗಿ ಬೌರಿಂಗ್ ಆಸ್ಪತ್ರೆಯಲ್ಲಿ ಇಬ್ಬರಿಗೆ ಶಿಲೀಂಧ್ರ ಸೋಂಕು ತಗುಲಿರುವುದು ದೃಢಪಟ್ಟಿದೆ. 7 ದಿನಗಳಲ್ಲಿ 26 ಮಂದಿಗೆ ಸೋಂಕು ತಗುಲಿರುವುದು ಖಚಿತಪಟ್ಟಿದೆ. ಈವರೆಗೆ ಈ ಸೋಂಕಿಗೆ ಒಳಗಾದವರ ಒಟ್ಟು ಸಂಖ್ಯೆ 1,068ಕ್ಕೆ ಏರಿಕೆಯಾಗಿದೆ.
ದೇಶದಲ್ಲಿ ಕುಸಿತವಾದ ಕೊರೊನಾ ಸೋಂಕಿತರ ಸಂಖ್ಯೆ
ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಈವರೆಗೆ 201 ಮಂದಿ ದಾಖಲಾಗಿದ್ದಾರೆ. ಅದೇ ರೀತಿ, ಬೌರಿಂಗ್ ಆಸ್ಪತ್ರೆಯಲ್ಲಿ ಒಟ್ಟು 310 ಹಾಗೂ ಕೆ.ಸಿ. ಜನರಲ್ ಆಸ್ಪತ್ರೆಯಲ್ಲಿ 3 ಪ್ರಕರಣಗಳನ್ನು ದಾಖಲಿಸಿಕೊಳ್ಳಲಾಗಿದೆ. ಕಪ್ಪು ಶಿಲೀಂಧ್ರ ಸೋಂಕಿತರಲ್ಲಿ ಈವರೆಗೆ 514 ಮಂದಿ ಸರ್ಕಾರಿ ವ್ಯವಸ್ಥೆಯಡಿ ದಾಖಲಾಗಿದ್ದಾರೆ. ಇನ್ನುಳಿದವರು ವಿವಿಧ ಖಾಸಗಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆದುಕೊಂಡಿದ್ದಾರೆ.
ಕೊರೊನ ಮಹಾಮಾರಿ:
ಕೊರೊನ ವೈರಸ್ ಹರಡಲು ಬೇಕಾಗಿರುವುದು ನಮ್ಮ ಸಹಾಯ ಆದರೆ ಹರಡದಂತೆ ಮಾಡಬೇಕಾಗಿರುದು ನಮ್ಮ ಸಹಕಾರ”.
ತಪ್ಪದೇ ಹೊರಗೆ ಹೋದಾಗ ಸ್ವಚ್ಛವಾದ ಮಾಸ್ಕ ಧರಿಸಿ.
ಸಾರ್ವಜನಿಕ ಸ್ಥಳಗಳಲ್ಲಿ ಸಾಮಾಜಿಕ ಅಂತರ ಕಾಪಾಡಿಕೊಳ್ಳಿ .
ಜನ ನಿಬಿಡ ಪ್ರದೇಶದಿಂದ ದೂರವಿರಿ.
ಮನೆ ಸಮೀಪದ ಅಂಗಡಿಯಲ್ಲಿ ಫೋನ್ ಮೂಲಕ ತಮಗೆ ಬೇಕಾದ ದಿನಸಿ ಮತ್ತು ಇತರ ವಸ್ತುಗಳನ್ನು ಪಟ್ಟಿ ಮಾಡಿ ನಿರ್ದಿಷ್ಟ ಸಮಯ ಗೊತ್ತು ಮಾಡಿ.
ನಿಮ್ಮ ಮನೆಗೆ ನೀವೇ ಲಕ್ಷ್ಮಣ ರೇಖೆ ಸೃಷ್ಟಿ ಮಾಡಿ.
ಅನಗತ್ಯ ಓಡಾಟ ಸಲ್ಲದು. ಹೊರಗಡೆ ಹೋಗಿ ಬಂದ ಮೇಲೆ ಬಟ್ಟೆ ಬದಲಾಯಿಸಿ ಸ್ನಾನ ಮಾಡಿ.
ನಮ್ಮ ಹೋರಾಟ ಕೊರೊನ ನಿರ್ಮೂಲನೆಯತ್ತ.
ಇದು ಸಾಕ್ಷ ಟಿವಿಯ ಕಳಕಳಿಯ ವಿನಂತಿ.