ಚಿತ್ರದುರ್ಗದಲ್ಲಿ ಕರಿಮಾರಿ ಅಬ್ಬರ : 11 ಮಂದಿಗೆ ಬ್ಲ್ಯಾಕ್ ಫಂಗಸ್ Chitradurga
ಚಿತ್ರದುರ್ಗ : ಜಿಲ್ಲೆಯಲ್ಲಿ ಕೊರೊನಾ ಕಾಟದ ಮಧ್ಯೆ ಕರಿಮಾರಿಯ ಅಬ್ಬರ ಮುಂದುವರೆದಿದೆ.
ಜಿಲ್ಲೆಯಲ್ಲಿ ದಿನದಿಂದ ದಿನಕ್ಕೆ ಬ್ಲ್ಯಾಕ್ ಫಂಗಸ್ ಪ್ರಕರಣಗಳು ಹೆಚ್ಚುತ್ತಿದ್ದು, ಹೊಸದಾಗಿ 11 ಮಂದಿಯಲ್ಲಿ ಬ್ಲ್ಯಾಕ್ ಫಂಗಸ್ ಪತ್ತೆಯಾಗಿದೆ.
ಇದರೊಂದಿಗೆ ಜಿಲ್ಲೆಯಲ್ಲಿ ಒಟ್ಟು 60 ಬ್ಲ್ಯಾಕ್ ಫಂಗಸ್ ಪ್ರಕರಣಗಳು ದಾಖಲಾಗಿವೆ.
ಈ ಪೈಕಿ ಕರ್ನಾಟಕ ಕಿವಿ, ಮೂಗು, ಗಂಟಲು ಆಸ್ಪತ್ರೆಯಲ್ಲಿ 18 ರೋಗಿಗಳು ಚಿಕಿತ್ಸೆ ಪಡೆಯುತ್ತಿದ್ದಾರೆ.
ಉಳಿದವರು ಜಿಲ್ಲಾಸ್ಪತ್ರೆ, ಬಸವೇಶ್ವರ ಮೆಡಿಕಲ್ ಕಾಲೇಜು ಆಸ್ಪತ್ರೆ ಹಾಗೂ ಬೆಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಈಗಾಗಲೇ ಕೊರೊನಾ ಅಬ್ಬರಕ್ಕೆ ಕೋಟೆನಾಡಿನ ಮಂದಿ ತತ್ತರಿಸಿ ಹೋಗಿದ್ದು, ಇದೀಗ ಬ್ಲ್ಯಾಕ್ ಫಂಗಸ್ ತನ್ನ ಕಬಂದ ಬಾಹುಗಳನ್ನು ಚಾಚುತ್ತಿರುವುದು ಜನರಲ್ಲಿ ಆತಂಕ ಹೆಚ್ಚಿಸಿದೆ.