ಕೊರೊನಾ 2ನೇ ನಡುವೆ ಮತ್ತೊಂದು ಭೀತಿ – 14 ಮಂದಿಯಲ್ಲಿ ಬ್ಲ್ಯಾಕ್ ಫಂಗಸ್ – ಇಬ್ಬರು ಬಲಿ..!
ಬೆಂಗಳೂರು: ರಾಜ್ಯದಲ್ಲಿ ಒಂದೆಡೆ ಕೊರೊನಾ 2 ನೇ ಅಲೆಯ ಆರ್ಭಟಕ್ಕೆ ಜನ ತತ್ತರಿಸಿಹೋಗಿದ್ದಾರೆ. ಆಕ್ಸಿಜನ್ ಕೊರೆತ, ಬೆಡ್ ಕೊರತೆ ಮತ್ತೊಂದೆಡೆ , ಸರಿಯಾದ ಸಮಯಕ್ಕೆ ಚಿಕಿತ್ಸೆ ಸಿಗದೇ , ಚಿಕಿತ್ಸೆಗೆ ಹಣವಿಲ್ಲದೇ ಪರದಾಡುವ ಸ್ಥಿತಿ ಇದೆ.. ದಿನೇ ದಿನೇ , ಸೋಂಕಿತರ ಸಂಖ್ಯೆ , ಸಾವಿನ ಸಂಖ್ಯೆ ಹೆಚ್ಚಾಗ್ತಲೇ ಇದೆ..
ಮತ್ತೊಂದೆಡೆ ದೇಶ ಹಾಗೂ ರಾಜ್ಯದಲ್ಲಿ ಅದ್ರಲ್ಲೂ ಸಿಲಿಕಾನ್ ಸಿಟಿ ಬೆಂಗಳೂರಲ್ಲಿ ಹೊಸ ವೈರಸ್ ನ ಹಾವಳಿಯೂ ಶುರುವಾಗಿದೆ.. ಬೆಂಗಳೂರಿನಲ್ಲಿ ಬ್ಲ್ಯಾಕ್ ಫಂಗಸ್ ಕಾಟ ಹೆಚ್ಚಾಗಿದೆ. ಈಗಾಗಲೇ ನಗರದಲ್ಲಿ ಒಟ್ಟು 14 ಮಂದಿಗೆ ಬ್ಲ್ಯಾಕ್ ಫಂಗಸ್ ಪತ್ತೆಯಾಗಿದ್ದು ಈ ಪೈಕಿ ಇಬ್ಬರು ಮೃತಪಟ್ಟಿದ್ದಾರೆ.
ಮೊದಲೇ ಕೊರೊನಾ ಆತಂಕದಲ್ಲಿ ಕಾಲ ಕಳೆಯುತ್ತಿರುವ ಸಿಲಿಕಾನ್ ಸಿಟಿ ಮಂದಿಗೆ ಇದೀಗ ಬ್ಲಾಕ್ ಫಂಗಸ್ ನ ಆತಂಕವೂ ಎದುರಾಗಿದೆ. 14 ಮಂದಿಯಲ್ಲಿ 7 ಮಂದಿ ವಿಕ್ಟೋರಿಯಾ ಆಸ್ಪತ್ರೆಯಲ್ಲಿ, 7 ಮಂದಿ ಇಎನ್ಟಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಈ ಪೈಕಿ ಇಬ್ಬರು ಬ್ಲ್ಯಾಕ್ ಫಂಗಸ್ಗೆ ಮೃತಪಟ್ಟಿದ್ದಾರೆ.
ಕೊರೊನ ಮಹಾಮಾರಿ:
ಕೊರೊನ ವೈರಸ್ ಹರಡಲು ಬೇಕಾಗಿರುವುದು ನಮ್ಮ ಸಹಾಯ ಆದರೆ ಹರಡದಂತೆ ಮಾಡಬೇಕಾಗಿರುದು ನಮ್ಮ ಸಹಕಾರ”.
ತಪ್ಪದೇ ಹೊರಗೆ ಹೋದಾಗ ಸ್ವಚ್ಛವಾದ ಮಾಸ್ಕ ಧರಿಸಿ.
ಸಾರ್ವಜನಿಕ ಸ್ಥಳಗಳಲ್ಲಿ ಸಾಮಾಜಿಕ ಅಂತರ ಕಾಪಾಡಿಕೊಳ್ಳಿ .
ಜನ ನಿಬಿಡ ಪ್ರದೇಶದಿಂದ ದೂರವಿರಿ.
ಮನೆ ಸಮೀಪದ ಅಂಗಡಿಯಲ್ಲಿ ಫೋನ್ ಮೂಲಕ ತಮಗೆ ಬೇಕಾದ ದಿನಸಿ ಮತ್ತು ಇತರ ವಸ್ತುಗಳನ್ನು ಪಟ್ಟಿ ಮಾಡಿ ನಿರ್ದಿಷ್ಟ ಸಮಯ ಗೊತ್ತು ಮಾಡಿ.
ನಿಮ್ಮ ಮನೆಗೆ ನೀವೇ ಲಕ್ಷ್ಮಣ ರೇಖೆ ಸೃಷ್ಟಿ ಮಾಡಿ.
ಅನಗತ್ಯ ಓಡಾಟ ಸಲ್ಲದು. ಹೊರಗಡೆ ಹೋಗಿ ಬಂದ ಮೇಲೆ ಬಟ್ಟೆ ಬದಲಾಯಿಸಿ ಸ್ನಾನ ಮಾಡಿ.
ನಮ್ಮ ಹೋರಾಟ ಕೊರೊನ ನಿರ್ಮೂಲನೆಯತ್ತ.
ಇದು ಸಾಕ್ಷ ಟಿವಿಯ ಕಳಕಳಿಯ ವಿನಂತಿ.