ಕೋಲಾರಕ್ಕೆ ವಕ್ಕರಿಸಿದ ಬ್ಲ್ಯಾಕ್ ಫಂಗಸ್ : 12 ಜನರಲ್ಲಿ ಸೋಂಕು Black Fungus
ಕೋಲಾರ : ಚಿನ್ನದ ನಾಡು ಕೋಲಾರದಲ್ಲಿ ಕೊರೊನಾ ಕಾಟದ ಮಧ್ಯೆ ಇದೀಗ ಜಿಲ್ಲೆಗೆ ಬ್ಲ್ಯಾಕ್ ಫಂಗಸ್ ವಕ್ಕರಿಸಿದೆ. ಕೊರೊನಾ ಸೋಂಕಿನಿಂದ ಚೇತರಿಸಿಕೊಂಡಿದ್ದ 12 ಜನರಲ್ಲಿ ಸೋಂಕು ಪತ್ತೆಯಾಗಿದೆ.
ಈ 12 ಜನರ ಪೈಕಿ ಏಳು ಜನರಿಗೆ ಆರ್.ಎಲ್.ಜಾಲಪ್ಪ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದ್ದು, ಸದ್ಯಕ್ಕೆ ನಾಲ್ಕು ಜನರಿಗೆ ಆಪರೇಷನ್ ಮಾಡಿ ಚಿಕಿತ್ಸೆ ನೀಡಲಾಗುತ್ತಿದೆ.
ಉಳಿದವರಿಗೆ ಚಿಕಿತ್ಸೆ ನೀಡಲು ಆಂಪೋರಿಯೋಸಿಸ್ ಬಿ ಇಂಜೆಕ್ಷನ್ ಸಿಗದ ಹಿನ್ನೆಲೆ ವೈದ್ಯರಿಗೆ ತಲೆನೋವಾಗಿ ಪರಿಣಮಿಸಿದೆ.
ಈಗಾಗಲೇ ಜಿಲ್ಲೆಯಲ್ಲಿ ಕೊರೊನಾ ಕಾಟ ಮುಂದುವರೆದಿದೆ. ಪ್ರತಿನಿತ್ಯ ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದೆ. ಈ ಮಧ್ಯೆ ಇದೀಗ ಬ್ಲ್ಯಾಕ್ ಫಂಗಸ್ ಕಾಣಿಸಿಕೊಂಡಿರುವುದು ಜನರ ನಿದ್ದೆಗೆಡಿಸಿದೆ.