ರಾಜ್ಯದಲ್ಲಿ ಬ್ಲ್ಯಾಕ್ ಫಂಗಸ್ ಗೆ 51 ಮಂದಿ ಬಲಿ Black fungus
ಬೆಂಗಳೂರು : ರಾಜ್ಯದಲ್ಲಿ ಕೊರೊನಾ ವೈರಸ್ ಕಾಟದ ಮಧ್ಯೆ ಬ್ಲ್ಯಾಕ್ ಫಂಗಸ್ ಅಟ್ಟಹಾಸ ದಿನದಿಂದ ದಿನಕ್ಕೆ ಏರುಗತಿಯಲ್ಲಿ ಸಾಗುತ್ತಿದೆ.
ರಾಜ್ಯದಲ್ಲಿ ಈ ಕರಿಮಾರಿಗೆ 51 ಮಂದಿ ಬಲಿಯಾಗಿದ್ದಾರೆ.
ರಾಜ್ಯದಲ್ಲಿ ಇದುವರೆಗೂ ಒಟ್ಟು 1,370 ಬ್ಲ್ಯಾಕ್ ಫಂಗಸ್ ಪ್ರಕರಣಗಳು ಪತ್ತೆಯಾಗಿದೆ.
ಇದರಲ್ಲಿ 1292 ರೋಗಿಗಳು ಚಿಕಿತ್ಸೆ ಪಡೆಯುತ್ತಿದ್ದು, 27 ಮಂದಿ ಮಾತ್ರ ಗುಣಮುಖರಾಗಿದ್ದಾರೆ.
ಇತ್ತ ಇದಕ್ಕೆ ಚಿಕಿತ್ಸೆ ನೀಡಲು ಔಷಧ ಕೊರತೆ ಉಂಟಾಗಿದ್ದು, ಕೇಂದ್ರ ಸಚಿವ ಸದಾನಂದಗೌಡರ ಜೊತೆಯಲ್ಲಿ ಮಾತುಕತೆ ನಡೆಸಲಾಗಿದೆ ಎಂದು ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ತಿಳಿಸಿದ್ದಾರೆ.