ರೈತ ಮುಖಂಡ ರಾಕೇಶ್ ಟಿಕಾಯತ್ ಮೇಲೆ ಹಲ್ಲೆ, ಮುಖಕ್ಕೆ ಮಸಿ ಎರಚಿದ ಕಿಡಿಗೇಡಿಗಳು
ಬೆಂಗಳೂರಿನ ಪ್ರೆಸ್ ಕ್ಲಬ್ ನಲ್ಲಿ ನಡೆದ ಸಭೆಯಲ್ಲಿ ರಾಷ್ಟ್ರೀಯ ಕಿಸಾನ್ ಮೋರ್ಚಾ ಅಧ್ಯಕ್ಷ ರಾಕೇಶ್ ಸಿಂಗ್ ಟಿಕಾಯತ್ ಮುಖಕ್ಕೆ ಮಸಿ ಬಳಿದು ಹಲ್ಲೆಗೆ ಯತ್ನಿಸಿರುವ ಘಟನೆ ಇಂದು ನಡೆದಿದೆ.
ಕೋಡಿಹಳ್ಳಿ ಚಂದ್ರಶೇಖರ್ ಅವರ ಮೇಲಿನ ಭ್ರಷ್ಟಾಚಾರ ಆರೋಪದ ಕುರಿತು ಸ್ಪಷ್ಟೀಕರಣ ನೀಡಲು ಗಾಂಧಿ ಭವನದಲ್ಲಿ ಸಭೆ ಕರೆಯಲಾಗಿತ್ತು. ರಾಷ್ಟ್ರೀಯ ಕಿಸಾನ್ ಮೊರ್ಚಾ ಅಧ್ಯಕ್ಷ ರಾಕೇಶ್ ಸಿಂಗ್ ಟಿಕಾಯತ್, ಯುದ್ದವೀರ ಸಿಂಗ್ , ಪ್ರೊಫೆಸರ್ ರವಿ ವರ್ಮಕುಮಾರ್, ಚುಕ್ಕಿ ನಂಜುಂಡಸ್ವಾಮಿ ಅವರು ವೇದಿಕೆಯಲ್ಲಿದ್ದರು.
ಕೋಡಿಹಳ್ಳಿ ಚಂದ್ರಶೇಖರ್ ಮೇಲೆ ಬಂದಿರುವ ಆರೋಪದ ಸಂಬಂಧ ರಾಕೇಶ್ ಟಿಕಾಯತ್ ಸುದ್ದಿಗೋಷ್ಠಿ ಕರೆದಿದ್ದರು. ಈ ವೇಳೆ ರೈತ ಸಂಘದ ಮೂಲ ಹೋರಾಟಗಾರರು ಕರೆದಿದ್ದ ಸಭೆಯಲ್ಲಿ ಹಾಜರಾಗಿದ್ದ ವ್ಯಕ್ತಿಯೊಬ್ಬ, ಮೋದಿ ಹೆಸರು ಕೂಗಿದ್ದ. ಏಕಾಏಕಿ ವೇದಿಕೆಗೆ ನುಗ್ಗಿದ್ದ ವ್ಯಕ್ತಿ, ರಾಕೇಶ್ ಟಿಕಾಯತ್ ಮೇಲೆ ಮೈಕ್ ಕಿತ್ತು ಹೊಡೆದಿದ್ದಾರೆ. ನಂತರ ಎಲ್ಲರೂ ವ್ಯಕ್ತಿಯನ್ನು ಹಿಡಿದು ಥಳಿಸಿದರು. ಕುರ್ಚಿಗಳನ್ನು ಹಿಡಿದು ತೂರಿದ್ದಾರೆ.
https://twitter.com/ANI/status/1531186202434744320?ref_src=twsrc%5Egoogle%7Ctwcamp%5Eserp%7Ctwgr%5Etweet
ಕೋಡಿಹಳ್ಳಿ ಚಂದ್ರಶೇಖರ್ ವಿರುದ್ಧ ಭ್ರಷ್ಟಾಚಾರ ಆರೋಪ ಕೇಳಿ ಬಂದಿತ್ತು. ಅದಾದ ನಂತರ ರಾಕೇಶ್ ಟಿಕಾಯತ್ ಮೇಲೆ ಕೋಡಿಹಳ್ಳಿ ಚಂದ್ರಶೇಖರ್ ಭ್ರಷ್ಟಾಚಾರದ ಆರೋಪ ಮಾಡಿದ್ದರು. ಇದಕ್ಕೆ ಇಂದು ಬೆಂಗಳೂರಿನ ಗಾಂಧಿ ಭವನದಲ್ಲಿ ಸ್ಪಷ್ಟೀಕರಣ ನೀಡಲು ಸುದ್ದಿಗೋಷ್ಠಿ ಕರೆದಿದ್ದರು. ಸುದ್ದಿಗೋಷ್ಠಿ ನಡೆಯುತ್ತಿದ್ದ ವೇಳೆಯೇ ಅವರ ಮೇಲೆ ಹಲ್ಲೆ ನಡೆಸಿ, ಬಳಿಕ ಅವರ ಮುಖಕ್ಕೆ ಮಸಿ ಬಳಿಯಲಾಗಿದೆ.








