ಹಾವೇರಿ: ವ್ಯಕ್ತಿಯೊಬ್ಬ ಸದ್ಯ ಯುವತಿಯ ಅಶ್ಲೀಲ ಫೋಟೋ ತೆಗೆದುಕೊಂಡು ಬ್ಲ್ಯಾಕ್ ಮೇಲ್ ಮಾಡಿ ಪೊಲೀಸರ ಅತಿಥಿಯಾಗಿರುವ ಘಟನೆ ನಡೆದಿದೆ.
ಈ ಘಟನೆ ಹಾನಗಲ್ ನಲ್ಲಿ ನಡೆದಿದ್ದು, ಮೈನುದ್ದೀನ್ ಮುಂಡಗೋಡ ಬಂಧಿತ ಆರೋಪಿಯಾಗಿದ್ದು, ಬಟ್ಟೆ ಅಂಗಡಿಯ ಟ್ರಯಲ್ ರೂಮ್ ನಲ್ಲಿ ಯುವತಿಯ ಅಶ್ಲೀಲ ಫೋಟೋ ತೆಗೆದು ಬ್ಲ್ಯಾಕ್ ಮೇಲ್ ಮಾಡುತ್ತಿದ್ದ ಎನ್ನಲಾಗಿದೆ. ತಾಲೂಕಿನ ಮಕರವಳ್ಳಿ ಗ್ರಾಮದ ಯುವತಿಯೊಬ್ಬಳು ಬಟ್ಟೆ ಖರೀದಿಸಲು ಅಂಗಡಿಗೆ ಬಂದಿದ್ದರು. ಈ ವೇಳೆ ಯುವತಿಯ ಅಶ್ಲೀಲ ಫೋಟೋ ತೆಗೆದುಕೊಂಡಿದ್ದ. ನಂತರ ಮೊಬೈಲ್ ನಂಬರ್ ಪಡೆದು ನಗ್ನವಾಗುವಂತೆ ಪೀಡಿಸಿದ್ದಾನೆ ಎಂದು ಆರೋಪ ಕೇಳಿ ಬಂದಿದೆ.
ಅಲ್ಲದೇ, ಯುವತಿಯಿಂದ 50 ಸಾವಿರ ರೂ., ಚಿನ್ನದ ಸರ ಪಡೆದಿದ್ದಾನೆ. ಆನಂತರ ಯುವತಿ ಪೊಲೀಸರಿಗೆ ದೂರು ನೀಡಿದ್ದಾರೆ. ಸದ್ಯ ಆರೋಪಿಯನ್ನು ಬಂಧಿಸಿರುವ ಪೊಲೀಸರು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.