ದಾವಣಗೆರೆಯಲ್ಲಿ ಮಾತನಾಡಿದ ಮಾಜಿ ಮುಖ್ಯಮಂತ್ರಿ ಮತ್ತು ಸಂಸದ ಬಸವರಾಜ ಬೊಮ್ಮಾಯಿ, ಚುನಾವಣೆಯಲ್ಲಿ ಸೋತಾಗ EVM ಅನ್ನು ದೂರುವುದು ಈಗ ಫ್ಯಾಷನ್ ಆಗಿದೆ ಎಂದು ಹೇಳಿದ್ದಾರೆ. ಡೆಲ್ಲಿ ವಿಧಾನಸಭೆ ಚುನಾವಣೆಯು, ಯಾರು ದೇಶದ ಬಗ್ಗೆ ಚಿಂತನೆ ಮಾಡುತ್ತಾರೆ ಅವರು ದೇಶದ ಅಭಿವೃದ್ಧಿಗೆ ಶ್ರಮಿಸುತ್ತಾರೆ, ಯಾರು ದೇಶ ಕಟ್ಟುತ್ತಾರೆ ಅವರಿಗೆ ಜನ ಬೆಂಬಲ ನೀಡುತ್ತಾರೆ ಎನ್ನುವ ಸ್ಪಷ್ಟ ಸಂದೇಶ ನೀಡಿದೆ ಎಂದು ಹೇಳಿದ್ದಾರೆ.
ದೇಶದ ಹಿತಾಸಕ್ತಿಯನ್ನು ಮರೆತು, ವಿದೇಶಗಳಲ್ಲಿ ದೇಶದ ವಿರುದ್ಧ ಮಾತನಾಡುವವರಿಗೆ ಜನ ತಕ್ಕ ಪಾಠ ಕಲಿಸಿದ್ದಾರೆ ಎಂದು ಅವರು ಪ್ರತಿಕ್ರಿಯೆ ವ್ಯಕ್ತಪಡಿಸಿದ್ದಾರೆ. ದೇಶ ಕಟ್ಟುವಲ್ಲಿ ಪ್ರಮುಖ ಪಾತ್ರ ವಹಿಸುವವರಿಗೆ ಮಾತ್ರ ಜನರ ಬೆಂಬಲ ಸಿಗುತ್ತದೆ ಎಂಬುದು ಈ ಚುನಾವಣೆಯ ಸಂದೇಶವಾಗಿದೆ ಎಂದು ಬೊಮ್ಮಾಯಿ ಹೇಳಿದ್ದಾರೆ.








