ರಾಯ್ಪುರ: ಛತ್ತೀಸ್ ಗಢದಲ್ಲಿ ಮಾವೋವಾದಿಗಳು ಸುಧಾರಿತ ಸ್ಫೋಟಕ ಸ್ಫೋಟಿಸಿದ್ದು, ಕರ್ತವ್ಯದಲ್ಲಿದ್ದ ಕಮಾಂಡೋಗೆ ಗಾಯಗಳಾಗಿವೆ.
ಛತ್ತೀಸ್ಗಢ ವಿಧಾನಸಭಾ ಚುನಾವಣೆಯ ಮೊದಲ ಹಂತದಲ್ಲಿ 20 ಸ್ಥಾನಗಳಿಗೆ ಮತದಾನ ನಡೆಯುತ್ತಿದೆ. ಅವುಗಳಲ್ಲಿ ಹಲವು ಕ್ಷೇತ್ರಗಳು ಮಾವೋವಾದಿ ಪೀಡಿತ ಬಸ್ತಾರ್ ನಲ್ಲಿವೆ. ಇಲ್ಲಿ ಚುನಾವಣೆಯ ಹಿನ್ನೆಲೆಯಲ್ಲಿ 25 ಸಾವಿರ ಭದ್ರತಾ ಸಿಬ್ಬಂದಿ ನಿಯೋಜಿಸಲಾಗಿದೆ.
ಸುಕ್ಮಾದ ತೊಂಡಮಾರ್ಕಾ ಪ್ರದೇಶದಲ್ಲಿ ಮಾವೋವಾದಿಗಳು ನಡೆಸಿದ ಐಇಡಿ ಸ್ಫೋಟದಲ್ಲಿ ಸಿಆರ್ಪಿಎಫ್ ಕೋಬ್ರಾ ಬೆಟಾಲಿಯನ್ನ ಯೋಧ ಗಾಯಗೊಂಡಿದ್ದಾರೆ. ಮೊದಲ ಹಂತದ ಪ್ರಚಾರದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಸಿಎಂ ಭೂಪೇಶ್ ಬಘೇಲ್ ವಿರುದ್ಧ ಮಹಾದೇವ್ ಬೆಟ್ಟಿಂಗ್ ಆ್ಯಪ್ ಹಗರಣದ ಕುರಿತು ವಾಗ್ದಾಳಿ ನಡೆಸಿದ್ದರು.