ಕಾರವಾರ: ಜಿಲ್ಲೆಯಲ್ಲಿ ಬೆಳ್ಳಂಬೆಳಗ್ಗೆ ನೆತ್ತರು ಹರಿದಿದ್ದು, ಉದ್ಯಮಿಯನ್ನು ಹತ್ಯೆ ಮಾಡಲಾಗಿದೆ.
ಮಹಾರಾಷ್ಟ್ರದ ಪುಣೆ ಮೂಲದ ಉದ್ಯಮಿ (Businessman) ಭೀಕರವಾಗಿ ಹತ್ಯೆಯಾಗಿದ್ದಾರೆ. ಈ ಘಟನೆ ಉತ್ತರ ಕನ್ನಡ (Uttara Kannada) ಜಿಲ್ಲೆಯ ಕಾರವಾರ ತಾಲೂಕಿನಲ್ಲಿ ನಡೆದಿದೆ.
ಮಹಾರಾಷ್ಟ್ರದ (maharashtra) ಪುಣೆ ಮೂಲದ ಉದ್ಯಮಿ ವಿನಾಯಕ ನಾಯ್ಕ (52) ಕೊಲೆಯಾಗಿರುವ ದುರ್ದೈವಿ. ತಾಲೂಕಿನ ಹಣಕೊಣ ಗ್ರಾಮದ ಮನೆಯಲ್ಲಿ ನಸುಕಿನ ಜಾವ ನಡೆದ ಘಟನೆ ನಡೆದಿದೆ. ಅಪರಿಚಿತ ದುಷ್ಕರ್ಮಿಗಳು ಏಕಾಏಕಿ ಬಂದು ವಿನಾಯಕ ದಂಪತಿ ಮೇಲೆ ಮಚ್ಚಿನಿಂದ ಹಲ್ಲೆ ನಡೆಸಿದ್ದಾರೆ. ಮಚ್ಚಿನ ಏಟಿಗೆ ಪತಿ ಸ್ಥಳದಲ್ಲೇ ಸಾವನ್ನಪ್ಪಿದ್ದು, ಪತ್ನಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಕೂಡಲೇ ಅವರನ್ನು ಕಾರವಾರ ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಉದ್ಯಮಿ ವಿನಾಯಕ ನಾಯ್ಕ ತಮ್ಮ ಪತ್ನಿಯೊಂದಿಗೆ ಕಳೆದ ವಾರ ಗ್ರಾಮ ದೇವರ ಜಾತ್ರೆಗೆಂದು ಹಣಕೊಣ ಗ್ರಾಮಕ್ಕೆ ಬಂದಿದ್ದರು. ಈ ಸಂದರ್ಭದಲ್ಲಿ ಕೊಲೆ ನಡೆದಿದೆ. ಕೊಲೆಗೆ ಕಾರಣ ತಿಳಿದು ಬಂದಿಲ್ಲ. ಈ ಕುರಿತು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.