ದೇಶದೆಲ್ಲೆಡೆ ಕೊರೊನಾ ಸೋಂಕು ಪ್ರಕರಣಗಳು ಹೆಚ್ಚಾಗುತ್ತಲೇ ಇವೆ. ರಾಜ್ಯದಲ್ಲೂ ಸದ್ಯದ ವರದಿ ಪ್ರಕಾರ ಸೋಂಕಿತರ ಸಂಖ್ಯೆ 19ಕ್ಕೆ ಏರಿದೆ.
ಇದರಿಂದ ಜನರು ಆತಂಕಕ್ಕೀಡಾಗಿದ್ದು, ಇದೀಗ ರಾಜ್ಯವನ್ನೇ ಬೆಚ್ಚಿಬೀಳಿಸುವ ಸುದ್ದಿವೊಂದು ಬಹಿರಂಗವಾಗಿದೆ. ಕೊರೊನಾ ಸೋಂಕಿತ ವ್ಯಕ್ತಿಯೊಬ್ಬ ರಕ್ತದಾನ ಮಾಡಿದ್ದಾನೆ ಎಂದು ಕೇರಳದ ಮಾಧ್ಯಮಗಳು ವರದಿ ಮಾಡಿವೆ.
ಕೇರಳದ ಕಾಸರಗೋಡಿನಲ್ಲಿ ಕೊರೊನಾ ಸೋಂಕಿತ ಪ್ರಕರಣವೊಂದು ಪತ್ತೆಯಾಗಿದ್ದು, ಸೋಂಕಿತ ವ್ಯಕ್ತಿ, ನಿನ್ನೆ ಮಂಗಳೂರಿನ ಆಸ್ಪತ್ರೆಯೊಂದರಲ್ಲಿ ರಕ್ತದಾನ ಮಾಡಿದ್ದ ಎನ್ನಲಾಗಿದೆ. ತಾನು ರಕ್ತದಾನ ಮಾಡುವ ಮುನ್ನ ನನಗೆ ಕೊರೊನಾ ಸೋಂಕು ಇರುವ ಬಗ್ಗೆ ಮಾಹಿತಿ ಇರಲಿಲ್ಲ ಅಂತ ಹೇಳಿದ್ದಾನೆ. ಈ ಬಗ್ಗೆ ಕಾಸರಗೋಡು ಆರೋಗ್ಯ ಇಲಾಖೆ ಮಂಗಳೂರು ಜಿಲ್ಲಾಡಳಿತಕ್ಕೆ ಮಾಹಿತಿ ನೀಡಿದ್ದು, ವ್ಯಕ್ತಿ ಎಲ್ಲಿ ಯಾರಿಗೆ ರಕ್ತದಾನ ಮಾಡಿದ್ದ ಎನ್ನುವುದರ ಬಗ್ಗೆ ಮಾಹಿತಿ ಬರಬೇಕಾಗಿದೆ.








