ವಿಜಯಪುರ: ಭೀಮಾ ತೀರದಲ್ಲಿ ಮತ್ತೊಮ್ಮೆ ನೆತ್ತರು ಹರಿದಿದೆ.
ದುಷ್ಕ್ರಮಿಗಳು ರೌಡಿಶೀಟರ್ ಮೇಲೆ ಗುಂಡಿನ ದಾಳಿ ನಡೆಸಿದ್ದಾರೆ. ಈ ಘಟನೆ ವಿಜಯಪುರ ಜಿಲ್ಲೆಯ ಚಡಚಣ ಪಟ್ಟಣದ ನೀವರಗಿ ರಸ್ತೆ ಹತ್ತಿರ ನಡೆದಿದೆ.
ಅಶೋಕ್ ಮಲ್ಲಪ್ಪ ಗಂಟಗಲ್ಲಿ ಎಂಬ ರೌಡಿಶೀಟರ್ ಮೇಲೆ ದುಷ್ಕರ್ಮಿಗಳು ಗುಂಡಿನ ದಾಳಿ ನಡೆಸಿದ್ದಾರೆ. ಅಶೋಕ್ ಕೊಲೆ ಸೇರಿದಂತೆ ಹಲವು ಪ್ರಕರಣಗಳಲ್ಲಿ ಅಪರಾಧಿಯಾಗಿದ್ದ. ಇತ್ತೀಚೆಗಷ್ಟೇ ಪೆರೋಲ್ ಮೇಲೆ ಹೊರಗೆ ಬಂದಿದ್ದ. ಈತ ತನ್ನ ಮನೆಯಿಂದ ಚಡಚಣ ಪಟ್ಟಣಕ್ಕೆ ಆಗಮಿಸುತ್ತಿದ್ದ ಸಂದರ್ಭದಲ್ಲಿ ಹಂತಕರು ಗುಂಡಿನ ದಾಳಿ ನಡೆಸಿದ್ದಾರೆ ಎಂದು ಪೊಲೀಸರು ಹೇಳಿದ್ದಾರೆ.
ಅಶೋಕ್ ನ ಮೇಲಿನ ಹಳೆಯ ದ್ವೇಷವೇ ಘಟನೆಗೆ ಕಾರಣ ಎಂದು ಶಂಕಿಸಲಾಗಿದೆ. ಅಶೋಕ ಪತ್ನಿ ಚಡಚಣ ಪಟ್ಟಣದ ವಾರ್ಡ್ ನಂಬರ್ 2ರ ಬಿಜೆಪಿ ಸದಸ್ಯೆಯಾಗಿದ್ದಾರೆ. ಚಡಚಣ ಪೊಲೀಸ್ ಠಾಣೆಯಲ್ಲಿ ಈ ಕುರಿತು ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಕೈಗೊಂಡಿದ್ದಾರೆ.