BMRCL Graduate Engineer Recruitment 2025 : ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತದಲ್ಲಿ ಅಗತ್ಯವಿರುವ ಗ್ರಾಜ್ಯುಯೇಟ್ ಇಂಜಿನಿಯರ್ ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಹುದ್ದೆ : ಗ್ರಾಜ್ಯುಯೇಟ್ ಇಂಜಿನಿಯರ್
ಕರ್ತವ್ಯ ಸ್ಥಳ : ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳು ಬೆಂಗಳೂರು, ಕರ್ನಾಟಕದಲ್ಲಿ ಕೆಲಸ ನಿರ್ವಹಿಸಬೇಕು.
ಖಾಲಿಯಿರುವ ಹುದ್ದೆಗಳ ಸಂಖ್ಯೆ : ಒಟ್ಟು 35 ಹುದ್ದೆಗಳ ಭರ್ತಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ.
ಶೈಕ್ಷಣಿಕ ಅರ್ಹತೆ : ಬಿಇ/ ಬಿ.ಟೆಕ್ ಸಿವಿ
ವೇತನ : ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ. 44,000 ವೇತನ ನೀಡಲಾಗುತ್ತದೆ.
ವಯೋಮಾನ : ಅಭ್ಯರ್ಥಿಯು ಗರಿಷ್ಠ 35 ವರ್ಷ ವಯಸ್ಸನ್ನು ಮೀರಿರಬಾರದು.
ಆಯ್ಕೆ ವಿಧಾನ : GATE ಸ್ಕೋರ್ ಅರ್ಹತೆಯ ಆಧಾರದ ಮೇಲೆ ದಾಖಲೆಗಳ ಪರಿಶೀಲನೆ ಹಾಗೂ ಸಂದರ್ಶನ ನಡೆಸಿ ಅಭ್ಯರ್ಥಿಗಳನ್ನು ಹುದ್ದೆಗಳಿಗೆ ಆಯ್ಕೆ ಮಾಡಲಾಗುವುದು.
ಅರ್ಜಿ ಸಲ್ಲಿಕೆಯ ವಿಧಾನ : ಅಭ್ಯರ್ಥಿಯು ಈ ಹುದ್ದೆಗೆ ಆನ್‌ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬೇಕು.
ಅರ್ಜಿ ಸಲ್ಲಿಸುವ ವಿಳಾಸ : ಜನರಲ್ ಮ್ಯಾನೇಜರ್ (ಹೆಚ್.ಆರ್), ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತ, ಮೂರನೇ ಮಹಡಿ, ಬಿ.ಎಂ.ಟಿ.ಸಿ ಕಾಂಪ್ಲೆಕ್ಸ್, ಕೆ.ಹೆಚ್. ರೋಡ್, ಶಾಂತಿನಗರ, ಬೆಂಗಳೂರು – 560027
ಅರ್ಜಿ ಶುಲ್ಕದ ವಿವರ : ಅರ್ಜಿ ಶುಲ್ಕ ಇರುವುದಿಲ್ಲ.
ಅರ್ಜಿಯನ್ನು ಸಲ್ಲಿಸಲು ನಿಗದಿಪಡಿಸಿದ ದಿನಾಂಕದ ವಿವರ :
ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ : ಏಪ್ರಿಲ್ 05, 2025
ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : ಮೇ 03, 2025
ಭರ್ತಿ ಮಾಡಿದ ಅರ್ಜಿಯನ್ನು ಕಛೇರಿಗೆ ಸಲ್ಲಿಸಲು ಕೊನೆಯ ದಿನಾಂಕ : ಮೇ 07, 2025








