BMRCL Recruitment 2025 – ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತ (BMRCL) ನಲ್ಲಿ ಅಗತ್ಯವಿರುವ ರೈಲು ಆಪರೇಟರ್ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಗೆ ಅರ್ಜಿ ಅಹ್ವಾನ ಮಾಡಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ.
ಉದ್ಯೋಗ ವಿವರಗಳು
ಇಲಾಖೆ ಹೆಸರು ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತ (BMRCL
ಹುದ್ದೆಗಳ ಹೆಸರು ರೈಲು ಆಪರೇಟರ್
ಒಟ್ಟು ಹುದ್ದೆಗಳು 50
ಅರ್ಜಿ ಸಲ್ಲಿಸುವ ಬಗೆ ಆಫ್ಲೈನ್ (Offline)
ಉದ್ಯೋಗ ಸ್ಥಳ – ಬೆಂಗಳೂರು
ವಿದ್ಯಾರ್ಹತೆ
ಬಿಎಂಆರ್‌ಸಿಎಲ್ ಅಧಿಕೃತ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು 10 ನೇ ತರಗತಿಯನ್ನು ಪೂರ್ಣಗೊಳಿಸಿರಬೇಕು, ಯಾವುದೇ ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾಲಯಗಳಿಂದ ಎಲೆಕ್ಟ್ರಿಕಲ್ ಎಂಜಿನಿಯರಿಂಗ್ / ಎಲೆಕ್ಟ್ರಿಕಲ್ ಮತ್ತು ಎಲೆಕ್ಟ್ರಾನಿಕ್ಸ್ ಎಂಜಿನಿಯರಿಂಗ್ / ದೂರಸಂಪರ್ಕ / ಎಲೆಕ್ಟ್ರಾನಿಕ್ಸ್ ಮತ್ತು ಸಂವಹನ ಎಂಜಿನಿಯರಿಂಗ್ / ಎಲೆಕ್ಟ್ರಿಕಲ್ ಪವರ್ ಸಿಸ್ಟಮ್ಸ್ / ಇಂಡಸ್ಟ್ರಿಯಲ್ ಎಲೆಕ್ಟ್ರಾನಿಕ್ಸ್ / ಮೆಕ್ಯಾನಿಕಲ್ ಎಂಜಿನಿಯರಿಂಗ್‌ನಲ್ಲಿ ಡಿಪ್ಲೊಮಾ ಪಡೆದಿರಬೇಕು.
ವಯೋಮಿತಿ
ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತ ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಯ ಗರಿಷ್ಠ ವಯಸ್ಸು 38 ವರ್ಷಗಳು,
(ಮೀಸಲಾತಿ ವ್ಯಾಪ್ತಿಯಲ್ಲಿ ಬರುವ ಅಭ್ಯರ್ಥಿಗಳಿಗೆ ವಯೋಸಡಿಲಿಕೆ ಇರಲಿದೆ.
ಅರ್ಜಿ ಸಲ್ಲಿಸುವ ವಿಳಾಸ
ವಿಳಾಸ ವಿವರಗಳು:
ಜನರಲ್ ಮ್ಯಾನೇಜರ್ (HR), ಬೆಂಗಳೂರು ಮೆಟ್ರೋ ರೈಲು ನಿಗಮ ಲಿಮಿಟೆಡ್, III ಮಹಡಿ, BMTC ಕಾಂಪ್ಲೆಕ್ಸ್, ಕೆ.ಎಚ್. ರಸ್ತೆ, ಶಾಂತಿನಗರ, ಬೆಂಗಳೂರು – 560027
ಪ್ರಮುಖ ದಿನಾಂಕಗಳು
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ 12-ಮಾರ್ಚ್-2025
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 04-ಏಪ್ರಿಲ್-2025








