ಸರ್ಕಾರಿ ಬಸ್ ಗಳಲ್ಲಿ ಅಕ್ರಮ ಗಾಂಜಾ ಮಾರುತ್ತಿದ್ದ ಬಿಎಂಟಿಸಿ ನೌಕರರು ಅಂದರ್..!
ಬಿಎಂಟಿಸಿ ಬಸ್ ಚಾಲಕ ಮತ್ತು ನಿರ್ವಾಹಕರಾಗಿದ್ದ ಇಬ್ಬರು ಸರ್ಕಾರಿ ಬಸ್ ಗಳಲ್ಲಿ ಗಾಂಜಾ ಮಾರುತ್ತಿದ್ದ ಆರೋಪದಲ್ಲಿ ಇದೀಗ ಪೊಲೀಸರಿಂದ ಬಂಧನಕ್ಕೆ ಒಳಗಾಗಿದ್ದಾರೆ.. ಗಾಂಜಾ ಮಾರಾಟ ಮಾಡ್ತಿದ್ದ ಬಿಎಂಟಿಸಿ ಸರ್ಕಾರಿ ನೌಕರರನ್ನ ಕೆಂಗೇರಿ ಪೊಲೀಸರು ಬಂಧಿಸಿದ್ದು, 9.8 ಕೆ.ಜಿ. ಗಾಂಜಾವನ್ನ ವಶಕ್ಕೆ ಪಡೆದುಕೊಂಡಿದ್ದಾರೆ.
ವಿಠ್ಠಲ್ ಭಜಂತ್ರಿ ಮತ್ತು ಶರಣಬಸಪ್ಪ ಬಂಧಿತ ಆರೋಪಿಗಳಾಗಿದ್ದಾರೆ. ಬಿಎಂಟಿಸಿಯಲ್ಲಿ ಚಾಲಕ ಮತ್ತು ನಿರ್ವಾಹಕರಾಗಿ ಕೆಲಸ ಮಾಡುತ್ತಿದ್ದ ಆರೋಪಿಗಳು ಗಾಂಜಾ ಮಾರಾಟ ಮಾಡುತ್ತಿದ್ದರು. ನಗರದ ಕೆಂಗೇರಿ ಸಮೀಪದ ತುರಹಳ್ಳಿ ಅರಣ್ಯ ಪ್ರದೇಶದಲ್ಲಿ ಅಕ್ರಮ ಚಟುವಟಿಗಳನ್ನ ನಡೆಸುತ್ತಿದ್ದರು ಎನ್ನಲಾಗಿದೆ.
ಇವರು ಕಳೆದ 3 ವರ್ಷಗಳಿಂದ ಅಕ್ರಮ ಗಾಂಜಾ ಮಾರಾಟ ದಂಧೆಯಲ್ಲಿ ಭಾಗಿಯಾಗಿದ್ದು, ವಿಜಯಪುರ ಮತ್ತು ಕಲಬುರಗಿಯಿಂದ ಗಾಂಜಾ ತಂದು ಕೆ.ಜಿ. ಗೆ 40-50 ಸಾವಿರಕ್ಕೆ ಮಾರಾಟ ಮಾಡುತ್ತಿದ್ದರು ಎನ್ನಲಾಗಿದೆ. ಆರೋಪಿಗಳ ವಿರುದ್ಧ ಕೆಂಗೇರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.