ಇಂದಿನಿಂದ BMTC ವಿದ್ಯಾರ್ಥಿ ರಿಯಾಯಿತಿ ಪಾಸ್ ಗೆ ಅರ್ಜಿ ಸಲ್ಲಿಕೆ ಆರಂಭ..!

1 min read

ಇಂದಿನಿಂದ BMTC ವಿದ್ಯಾರ್ಥಿ ರಿಯಾಯಿತಿ ಪಾಸ್ ಗೆ ಅರ್ಜಿ ಸಲ್ಲಿಕೆ ಆರಂಭ..!

ಬೆಂಗಳೂರು: ಕೊರೊನಾ ನಿಯಂತ್ರಣಕ್ಕೆ ಬರುತ್ತಿರುವ ಬೆನ್ನಲ್ಲೇ ರಾಜ್ಯದ ಶಾಲಾ ಕಾಲೇಜುಗಳು ಪುನರಾರಂಭಗೊಂಡಿದ್ದು, ವಿದ್ಯಾರ್ಥಿಗಳು ಎಂದಿನಂತೆ ಶಾಲೆಗಳಿಗೆ ಮರಳುತ್ತಿದ್ದಾರೆ.. ಮತ್ತೊಂದೆಡೆ ಸರ್ಕಾರಿ ಶಾಲೆಗಳಲ್ಲಿ ಬಿಸಿಯೂಟದ ಸೌಲಭ್ಯವೂ ಆರಂಭವಾಗಿದೆ. ಇತ್ತ ಬಸ್ ಪಾಸ್ ನೀಡುವ ಚಟುವಟಿಕೆಯೂ ಶುರುವಾಗಿದೆ..

 2021-22ನೇ ಸಾಲಿನ ವಿದ್ಯಾರ್ಥಿ ರಿಯಾಯಿತಿ ಪಾಸ್ ಗೆ ಅರ್ಜಿ ಸಲ್ಲಿಸಲು, ಬಿಎಂಟಿಸಿ ( BMTC )ಇಂದಿನಿಂದ ಆರಂಭಗೊಳಿಸುತ್ತಿದೆ. ಈ ಕುರಿತಂತೆ ಬಿಎಂಟಿಸಿ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದು ವಿದ್ಯಾರ್ಥಿಗಳ ಹಿತವನ್ನು ಗಮನದಲ್ಲಿಟ್ಟುಕೊಂಡು, ಸರ್ಕಾರದ ನಿರ್ದೇಶನದಂತೆ ರಿಯಾಯಿತಿ ದರದಲ್ಲಿ ವಿದ್ಯಾರ್ಥಿ ರಿಯಾಯಿತಿ ಪಾಸುಗಳನ್ನು ( BMTC Student Bus Pass ) ವಿತರಣೆ ಮಾಡಲಾಗುತ್ತಿದೆ.

ಅದರಂತೆ 2021-22ನೇ ಸಾಲಿನ ವಿದ್ಯಾರ್ಥಿ ಪಾಸಿಗಾಗಿ ದಿನಾಂಕ 12-11-2021ರಿಂದ ಆನ್ ಲೈನ್ ಮೂಲಕ ಅರ್ಜಿ ಸ್ವೀಕರಿಸಲಾಗುವುದು. ವಿದ್ಯಾರ್ಥಿಗಳು ಪಾಸಿಗಾಗಿ ಸೇವಾಸಿಂಧು ಪೋರ್ಟನ್ https://sevasindhu.karnataka.gov.in ಮೂಲಕ ಅರ್ಜಿ ಸಲ್ಲಿಸುವಂತೆ ತಿಳಿಸಿದೆ. ವಿದ್ಯಾರ್ಥಿ ಪಾಸಿನ ಅರ್ಜಿಗಳನ್ನು ಸಂಬಂಧಿಸಿದ ಶಿಕ್ಷಣ ಸಂಸ್ಥೆಗಳಿಂದ ಮತ್ತು ಬಿಎಂಟಿಸಿಯಿಂದ ಅನುಮೋದಿಸಲಾಗುವುದು. ನಂತರ ವಿದ್ಯಾರ್ಥಿಗಳು ತಮ್ಮ ಅನುಕೂಲಕ್ಕೆ ತಕ್ಕಂತೆ ಪಾಸು ವಿತರಣೆಗಾಗಿ ಬೆಂಗಳೂರು ಒನ್ ಕೇಂದ್ರ, ದಿನಾಂಕ, ಸಮಯವನ್ನು ನಿಗಧಿಪಡಿಸಿಕೊಳ್ಳುವುದು.

ಪಾಸು ವಿತರಣಾ ಕೇಂದ್ರಕ್ಕೆ ವಿದ್ಯಾರ್ಥಿಗಳು ಭೇಟಿ ನೀಡುವ ಸಂದರ್ಭದಲ್ಲಿ ಕೇಂದ್ರ, ದಿನಾಂಕ, ಸಮಯವನ್ನು ನಿಗದಿಪಡಿಸಿಕೊಂಡ ಸ್ವೀಕೃತಿ ಪತ್ರ, ಶಾಲಾ, ಕಾಲೇಜಿನ ಗುರುತಿನ ಚೀಟಿ, ಶುಲ್ಕ ರಸೀದಿ, ಶಾಲಾ ಮುಖ್ಯಸ್ಥರಿಂದ ದೃಢೀಕರಿಸಿದ ಪತ್ರವನ್ನು ಹಾಜರುಪಡಿಸುವುದು. ವಿದ್ಯಾರ್ಥಿಗಳಿಗೆ ಸ್ಮಾರ್ಟ್ ಕಾರ್ಡ್ ವಿದ್ಯಾರ್ಥಿ ಪಾಸುಗಳನ್ನು ದಿನಾಂಕ 14-11-2021ರಿಂದ ಬೆಂಗಳೂರು ಒನ್ ಕೇಂದ್ರಗಳಲ್ಲಿ ವಿತರಣೆ ಮಾಡಲು ಕ್ರಮ ಕೈಗೊಳ್ಳಲಾಗಿದೆ ಎಂದು ತಿಳಿಸಿದ್ದಾರೆ.

Leave a Reply

Your email address will not be published. Required fields are marked *

YOU MUST READ

Copyright © All rights reserved | SaakshaTV | JustInit DigiTech Pvt Ltd