ಬೆಂಗಳೂರು: 5, 8, 9, 11ನೇ ತರಗತಿಗಳ ಬೋರ್ಡ್ ಪರೀಕ್ಷೆ ವಿಚಾರಕ್ಕೆ ಸಂಬಂಧಿಸಿದಂತೆ ಬೆಳಿಗ್ಗೆ 10.30ಕ್ಕೆ ಹೈಕೋರ್ಟ್ ವಿಭಾಗೀಯ ಪೀಠ ತೀರ್ಪು ಪ್ರಕಟಿಸಲಿದೆ.
ಬೆಳಗ್ಗೆ 10.30ಕ್ಕೆ ನ್ಯಾಯಮೂರ್ತಿ ಕೆ.ಸೋಮಶೇಖರ್ ಹಾಗೂ ನ್ಯಾಯಮೂರ್ತಿ ಕೆ.ರಾಜೇಶ್ ರೈ ಇರುವ ಹೈಕೋರ್ಟ್ ಪೀಠ ತೀರ್ಪು ಪ್ರಕಟಿಸಲಿದೆ. ಏಕಸದಸ್ಯ ಪೀಠ, ಶಾಲೆಗಳ ಬೋರ್ಡ್ ಪರೀಕ್ಷೆ ರದ್ದುಪಡಿಸಿತ್ತು. ನಂತರ ಏಕಸದಸ್ಯ ಪೀಠದ ಆದೇಶಕ್ಕೆ ವಿಭಾಗೀಯ ಪೀಠ ತಡೆ ನೀಡಿತ್ತು. ವಿಭಾಗೀಯ ಪೀಠದ ಆದೇಶಕ್ಕೆ ಸುಪ್ರೀಂಕೋರ್ಟ್ ತಡೆಯಾಜ್ಞೆ ನೀಡಿ, ಮೇಲ್ಮನವಿ ವಿಚಾರಣೆ ಪೂರ್ಣಗೊಳಿಸಲು ಸುಪ್ರೀಂಕೋರ್ಟ್ ಸೂಚಿಸಿತ್ತು. ಹೀಗಾಗಿ ಸರ್ಕಾರದ ಮೇಲ್ಮನವಿ ಕುರಿತು ಹೈಕೋರ್ಟ್ ತೀರ್ಪು ಕಾಯ್ದಿರಿಸಿತ್ತು. ಸದ್ಯ ನಾಳೆ ತೀರ್ಪು ಪ್ರಕಟವಾಗಲಿದೆ.
5, 8 ಮತ್ತು 9ನೇ ತರಗತಿಗಳ SA-2 ಮೌಲ್ಯಾಂಕನ ಪರೀಕ್ಷೆಗಳನ್ನು ಶಿಕ್ಷಣ ಇಲಾಖೆ ಮುಂದಿನ ಆದೇಶದವರೆಗೆ ಮುಂದೂಡುವಂತೆ ಶಾಲೆಗಳಿಗೆ ಸೂಚಿಸಿ, ಶಾಲಾ ಶಿಕ್ಷಣ ಇಲಾಖೆ ಆಯುಕ್ತೆ ಬಿಬಿ ಕಾವೇರಿ ಆದೇಶ ಹೊರಡಿಸಿದ್ದರು. 5, 8, 9 ಹಾಗೂ 11 ನೇ ತರಗತಿಗಳ ಬೋರ್ಡ್ ಪರೀಕ್ಷೆಗೆ ಅನುಮತಿ ನೀಡುವ ಕರ್ನಾಟಕ ಹೈಕೋರ್ಟ್ನ ವಿಭಾಗೀಯ ಪೀಠದ ಆದೇಶಕ್ಕೆ ಸುಪ್ರೀಂ ಕೋರ್ಟ್ ತಡೆ ನೀಡಿತ್ತು. 5, 8, 9, 11ನೇ ತರಗತಿಗಳ ಬೋರ್ಡ್ ಪರೀಕ್ಷೆಗೆ ಅನುಮತಿ ನೀಡಿ ಹೈಕೋರ್ಟ್ ಆದೇಶವನ್ನು ರೂಪ್ಸ ಹಾಗೂ ಅವರ್ ಸ್ಕೂಲ್ಸ್ ಸುಪ್ರೀಂಕೋರ್ಟ್ನಲ್ಲಿ ಪ್ರಶ್ನಿಸಿತ್ತು. ಸದ್ಯ ಮೇಲ್ಮನವಿ ಪುರಸ್ಕರಿಸಿದ ಸುಪ್ರೀಂ ಕೋರ್ಟ್ ಪರೀಕ್ಷೆ ನಡೆಸದಂತೆ ತೀರ್ಪು ನೀಡಿತ್ತು.