ನೇಣು ಬಿಗಿದ ಸ್ಥಿತಿಯಲ್ಲಿ ವಿದ್ಯಾರ್ಥಿ ಶವ ಪತ್ತೆ, ಕೊಲೆ ಶಂಕೆ….
ಬಸವಕಲ್ಯಾಣ ತಾಲೂಕಿನ ಮುಡಬಿ ಸರ್ಕಾರಿ ವಸತಿ ಶಾಲೆಯಲ್ಲಿ ಕಿಟಕಿಗೆ ನೇಣು ಬೀಗಿದ ಸ್ಥಿತಿಯಲ್ಲಿ ಹತ್ತನೇ ತರಗತಿ ವಿದ್ಯಾರ್ಥಿ ಶವ ಪತ್ತೆಯಾಗಿದೆ. ಮುಡಬಿಯ ಶ್ರೀಮತಿ ಇಂದಿರಾಗಾಂಧಿ ವಸತಿ ಶಾಲೆ ಮತ್ತು ಆಡಳಿತ ಭವನದ ತರಗತಿಯಲ್ಲಿ ಕಿಟಕಿ ಬಳಿ ಶವ ಪತ್ತೆಯಾಗಿದ್ದು, ಕೊಲೆ ಶಂಕೆ ವ್ಯಕ್ತವಾಗಿದೆ.
ವಿದ್ಯಾರ್ಥಿಯನ್ನ ಕೊಲೆ ಮಾಡಿ ಶವವನ್ನ ಕಿಟಕಿಗೆ ಕಟ್ಟಿ ಆತ್ಮಹತ್ಯೆ ಬಿಂಬಿಸುವ ಪ್ರಯತ್ನ ಮಾಡಲಾಗಿದೆ ಎಂದು ಕಟುಂಬಸ್ಥರು ಮತ್ತುಪೋಷಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಮೃತ ವಿದ್ಯಾರ್ಥಿ ಪವನ ತಂದೆ ಹಣಮಂತ, ವಾಡಿ ಆರ್ ಗ್ರಾಮದವನಾಗಿದ್ದು ಹತ್ತನೆ ತರಗತಿಯಲ್ಲಿ ವ್ಯಾಸಾಂಗ ಮಾಡುತ್ತಿದ್ದ. ಸ್ಥಳದಲ್ಲಿ ಪೊಷಕರ ಹಾಗೂ ಸಂಬಂದಿಕರಿಂದ ಭಾರಿ ಪ್ರತಿಭಟನೆ ವ್ಯಕ್ತವಾಗಿದೆ. ಸ್ಥಳಕ್ಕೆ ಮುಡಬಿ ಪೊಲೀಸ್ ರ ಭೇಟಿ ಪರಿಶೀಲನೆ ಮರಣೊತ್ತರ ಪರೀಕ್ಷೆಗೆ ಶವ ರವಾನಿಸಿದ್ದಾರೆ.
Body of student found hanging in in Basavakalyana








