ಮುಂಬೈ: ಉಕ್ಕಿನ ಕಾರ್ಖಾನೆಯಲ್ಲಿ ಬಾಯ್ಲರ್ ಸ್ಫೋಟಗೊಂಡ ಪರಿಣಾಮ ಕೆಲಸ ಮಾಡುತ್ತಿದ್ದ 22 ಕಾರ್ಮಿಕರ ಸ್ಥಿತಿ ಗಂಭೀರವಾಗಿದೆ.
ಮಹಾರಾಷ್ಟ್ರದ (Maharashtra) ಜಲ್ನಾ ನಗರದ ಎಂಐಡಿಸಿ ಪ್ರದೇಶದಲ್ಲಿನ ಉಕ್ಕಿನ ಕಾರ್ಖಾನೆಯಲ್ಲಿ ಬಾಯ್ಲರ್ ಸ್ಫೋಟಗೊಂಡಿ (Boiler Explosion)ದೆ. ಪರಿಣಾಮ 22 ಜನ ಕಾರ್ಮಿಕರು ಗಾಯಗೊಂಡಿದ್ದಾರೆ. ಈ ಪೈಕಿ ಮೂವರ ಸ್ಥಿತಿ ಚಿಂತಾಜನಕವಾಗಿದೆ ಎಂದು ತಿಳಿದು ಬಂದಿದೆ.
ಗಜ್ ಕೇಸರಿ ಸ್ಟೀಲ್ ಮಿಲ್ ಎಂಬ ಹೆಸರಿನ ಕಾರ್ಖಾನೆಯಲ್ಲಿ ಈ ಘಟನೆ ನಡೆದಿದೆ. ಸ್ಫೋಟದ ವೇಳೆ ಕಬ್ಬಿಣ ಕರಗಿ ಕಾರ್ಮಿಕರ ಮೇಲೆ ಬಿದ್ದಿದೆ.
ಮೂವರನ್ನು ಛತ್ರಪತಿ ಸಂಭಾಜಿನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಕಂಪನಿಯಲ್ಲಿ ಸ್ಟೀಲ್ ಕಂಬಿಗಳನ್ನು ನಿರ್ಮಿಸಲಾಗುತ್ತದೆ. ಘಟನೆಗೆನಿಖರ ಕಾರಣ ತಿಳಿದು ಬಂದಿಲ್ಲ. ಸ್ಥಳಕ್ಕೆ ಭೇಟಿ ನೀಡಿರುವ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.