ಬಳ್ಳಾರಿ: ಬಿಸ್ಕೆಟ್ ಫ್ಯಾಕ್ಟರಿಯಲ್ಲಿ (Biscuit Factory) ಬಾಯ್ಲರ್ (Boiler) ಸ್ಫೋಟವಾದ ಪರಿಣಾಮ ಓರ್ವ ಕಾರ್ಮಿಕ ಸಾವನ್ನಪ್ಪಿ, ಐವರು ಗಾಯಗೊಂಡಿರುವ ಘಟನೆ ನಡೆದಿದೆ.
ಈ ಘಟನೆ ಬಳ್ಳಾರಿಯ ಗುಗ್ಗರಹಟ್ಟಿ ಪ್ರದೇಶದ ಬಿಸ್ಕೆಟ್ ಫ್ಯಾಕ್ಟರಿಯಲ್ಲಿ ನಡೆದಿದೆ. ಬಾಯ್ಲರ್ ಸ್ಫೋಟಗೊಂಡ ಪರಿಣಾಮ ಸಲೀಂ ಎನ್ನುವ ಕಾರ್ಮಿಕ ಸಾವನ್ನಪ್ಪಿದ್ದಾರೆ. ಅಲ್ಲದೇ, ಮತ್ತೋರ್ವ ವ್ಯಕ್ತಿಯ ಸ್ಥಿತಿ ಗಂಭೀರವಾಗಿದ್ದು, ಇನ್ನುಳಿದವರು ಚಿಕಿತ್ಸೆ ಪಡೆಯುತ್ತಿದ್ದಾರೆ. ಬಾಯ್ಲರ್ ಸ್ಫೋಟಕ್ಕೆ ನಿಖರ ಕಾರಣ ತಿಳಿದು ಬಂದಿಲ್ಲ. ಸ್ಥಳಕ್ಕೆ ಬಳ್ಳಾರಿ ಗ್ರಾಮೀಣ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.