ಕೋವಿಡ್ ನಿಯಂತ್ರಣಕ್ಕೆ ದಿಟ್ಟ ಕ್ರಮ : ಬೊಮ್ಮಾಯಿ
ಬೀದರ್ : ಜನರ ಸಹಕಾರ ಇದ್ದರೆ ಮಾತ್ರ ಯಾವುದೇ ಲಾಕ್ ಡೌನ್ ಮತ್ತು ಆರ್ಥಿಕ ನಿಬರ್ಂಧ ಇಲ್ಲದೇ ಕೋವಿಡ್ ನಿಯಂತ್ರಣ ಸಾಧ್ಯ. ಇಲ್ಲದಿದ್ದರೆ ಎಲ್ಲರೂ ಕಠಿಣ ಪರಿಸ್ಥಿತಿಯನ್ನು ಎದುರಿಸಬೇಕಾಗುತ್ತದೆ ಎಂದು ಸಚಿವ ಬಸವರಾಜ್ ಬೊಮ್ಮಾಯಿ ಎಚ್ಚರಿಸಿದ್ದಾರೆ.
ಬೀದರ್ ನಲ್ಲಿ ಮಾತನಾಡಿದ ಅವರು, ಯಡಿಯೂರಪ್ಪ ಈಗಾಗಲೇ ಕೆಲ ಜಿಲ್ಲೆಗಳಲ್ಲಿ ಕೋವಿಡ್ ನಿಯಂತ್ರಣಕ್ಕೆ ನೈಟ್ ಕಪ್ರ್ಯೂ ಜಾರಿಗೊಳಿಸಿದ್ದಾರೆ. ಕೋವಿಡ್ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಹೀಗಾಗಿ, ರಾತ್ರಿ ಕಫ್ರ್ಯೂ ಜಾರಿ ಅನಿವಾರ್ಯವಾಗಿದೆ.
ನೈಟ್ ಕಫ್ರ್ಯೂ ಜಾರಿ ಮಾಡಲಾಗಿರುವ ಜಿಲ್ಲೆಗಳಲ್ಲಿ ನಿಯಂತ್ರಣ ಕ್ರಮಗಳನ್ನ ಕಟ್ಟುನಿಟ್ಟಾಗಿ ಅನುಷ್ಠಾನಕ್ಕೆ ತರುವಂತೆ ಈಗಾಗಲೇ ನಾನು ಪೆÇಲೀಸ್ ಅಧಿಕಾರಿಗಳಿಗೆ ಸೂಚಿಸಿದ್ದೇನೆ ಎಂದು ತಿಳಿಸಿದರು.
ಕೋವಿಡ್ ನಿಯಂತ್ರಣ ತಪ್ಪಿದರೆ ಕಠಿಣ ಪರಿಸ್ಥಿತಿ ಎದುರಿಸಬೇಕಾದ ಅನಿವಾರ್ಯತೆ ಸೃಷ್ಟಿಯಾಗುತ್ತದೆ. ಅದಕ್ಕೆ ಅವಕಾಶ ಮಾಡಿಕೊಡಬೇಡಿ ಎಂದು ಮನವಿ ಮಾಡಿಕೊಂಡ ಬೊಮ್ಮಾಯಿ, ಸದ್ಯಕ್ಕೆ ನಾವೇ ಪರಿಸ್ಥಿತಿಯನ್ನು ನಿಭಾಯಿಸುವ ಸ್ಥಿತಿಯಲ್ಲಿದ್ದೇವೆ. ಆದರೆ, ಇದಕ್ಕೆ ಜನರ ಸಹಕಾರ ಅತಿಮುಖ್ಯ.
ಜನರ ಸಹಕಾರ ಸಿಕ್ಕಿದ್ದೇ ಆದರೆ ಇದನ್ನು ನಾವು ಯಾವುದೇ ಲಾಕ್ ಡೌನ್ ಇಲ್ಲದೇ, ಆರ್ಥಿಕ ನಿಬರ್ಂಧ ಎದುರಿಸದೇ ನಿಯಂತ್ರಿಸಲು ಸಾಧ್ಯವಾಗುತ್ತದೆ ಎಂದು ಹೇಳಿದರು.