ಕೋಲಾರದಲ್ಲಿ ಟ್ರ್ಯಾಕ್ಟರ್ ಗೆ ಬೊಲೆರೋ ಡಿಕ್ಕಿ : ಇಬ್ಬರು ಸಾವು Kolar saaksha tv
ಕೋಲಾರ : ಟ್ರ್ಯಾಕ್ಟರ್ ಗೆ ಬೊಲೆರೋ ವಾಹನ ಡಿಕ್ಕಿ ಹೊಡೆದ ಪರಿಣಾಮ ಇಬ್ಬರೂ ಸ್ಥಳದಲ್ಲಿಯೇ ಸಾವನ್ನಪ್ಪಿರುವ ಘಟನೆ ಕೋಲಾರದಲ್ಲಿ ನಡೆದಿದೆ.
ಚಿಕ್ಕಬಳ್ಳಾಪುರ ಮೂಲದ 45 ವರ್ಷದ ಹನುಮಂತು ಹಾಗು ಭುವನ್ ಮೃತ ದುರ್ದೈವಿಗಳಾಗಿದ್ದಾರೆ.
ರಸ್ತೆಯಲ್ಲಿ ಡಿಕ್ಕಿ ಸಂಭವಿಸುತ್ತಿದ್ದಂತೆ ಸ್ಥಳೀಯರು ಘಟನಾಸ್ಥಳಕ್ಕೆ ಧಾವಿಸಿದ್ದು, ಅಷ್ಟೋತ್ತಿಗಾಗಲೇ ತಂದೆ ಮಗ ಇಬ್ಬರೂ ಕೊನೆಯುಸಿರೆಳೆದಿದ್ದಾರೆ.
ಇನ್ನು ಘಟನೆ ಬಗ್ಗೆ ಮಾಸ್ತಿ ಪೊಲೀಸರಿಗೆ ಸ್ಥಳೀಯರು ಮಾಹಿತಿ ನೀಡಿದ್ದು, ಸ್ಥಳಕ್ಕೆ ಮಾಸ್ತಿ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.