3,600 ಡ್ಯಾನ್ಸರ್ಸ್ ನೆರವಿಗೆ ಬಂದ ಬಾಲಿವುಡ್ ನಟ ಅಕ್ಷಯ್ ಕುಮಾರ್
ಮುಂಬೈ: ದೇಶದಲ್ಲಿ ಕೋವಿಡ್ 2ನೇ ಅಲೆ ಸೃಷ್ಟಿಸಿರುವ ಭೀಕರ ಪರಿಸ್ಥಿತಿಗೆ ಜನರು ಅದ್ರಲ್ಲು ಬಡವರು ತತ್ತರಿಸಿಹೋಗಿದ್ದಾರೆ. ಒಂದೆಡೆ ಆಕ್ಸಿಜನ್ ಕೊರೆತ, ಬೆಡ್ ಕೊರತೆ ಮತ್ತೊಂದೆಡೆ , ಸರಿಯಾದ ಸಮಯಕ್ಕೆ ಚಿಕಿತ್ಸೆ ಸಿಗದೇ , ಚಿಕಿತ್ಸೆಗೆ ಹಣವಿಲ್ಲದೇ ಪರದಾಡುವ ಸ್ಥಿತಿ ಇದೆ.. ದಿನೇ ದಿನೇ , ಸೋಂಕಿತರ ಸಂಖ್ಯೆ , ಸಾವಿನ ಸಂಖ್ಯೆ ಹೆಚ್ಚಾಗ್ತಲೇ ಇದೆ..
ಈ ನಡುವೆ ಸ್ಯಾಂಡಲ್ ವುಡ್ , ಬಾಲಿವುಡ್ , ಟಾಲಿವುಡ್ , ಕಾಲಿವುಡ್ ನ ಅನೇಕ ಸಿನಿಮಾ ತಾರೆಯರು ಬಡವರಿಗೆ , ಕೋವಿಡ್ ಸೋಂಕಿತರಿಗೆ ತಮಗೆ ತೋಚಿದ ಸಹಾಯಗಳನ್ನ ಮಾಡುತ್ತಿದ್ದಾರೆ. ಕಿಚ್ಚ ಸುದೀಪ್ , ಶ್ರೀಮುರುಳಿ, ರಾಗಿಣಿ, ಅಕ್ಷಯ್ ಕುಮಾರ್ , ಸಲ್ಮಾನ್ ಖಾನ್ , ಸೋನು ಸೂದ್ , ಹೀಗೆ ಹಲವರು ಕಷ್ಟದ ಸಂದರ್ಭದಲ್ಲಿ ಸಹಾಯಾಸ್ತ ಚಾಚಿದ್ದಾರೆ.
ಅದ್ರಂತೆ ಕೊರೊನಾ ಸಂಕಷ್ಟದಲ್ಲಿ ಕೆಲಸ ಇಲ್ಲದೆ ಕಷ್ಟದಲ್ಲಿ ಇರುವ 3,600 ಡ್ಯಾನ್ಸರ್ಸ್ ನೆರವಿಗೆ ಬಾಲಿವುಡ್ ನಟ ಅಕ್ಷಯ್ ಕುಮಾರ್ ಉಚಿತವಾಗಿ ದಿನಸಿ ನೀಡಲು ನಿರ್ಧಾರ ಮಾಡಿದ್ದಾರೆ.
ಈ ಹಿಂದೆ ಆಕ್ಸಿಜನ್ ಕಾನ್ಸನ್ಟ್ರೇಟರ್ ದಾನ ಮಾಡಿ ಗೌತಮ್ ಗಂಭೀರ ಪ್ರತಿಷ್ಠಾನಕ್ಕೆ 1 ಕೋಟಿ ಕೊಡುಗೆ ನೀಡಿದ್ದರು. ಇದೀಗ 3,600 ಡ್ಯಾನ್ಸರ್ಸ್ಗೆ ಉಚಿತವಾಗಿ ದಿನಸಿಯನ್ನು ನೀಡಲು ಮುಂದಾಗಿದ್ದಾರೆ.
ಅಕ್ಷಯ್ ಅವರು 50 ನೇ ವರ್ಷದ ಹುಟ್ಟುಹಬ್ಬದಂದು ಬಾಲಿವುಡ್ ನೃತ್ಯ ಸಂಯೋಜಕ ಗಣೇಶ್ ಆಚಾರ್ಯ ಅವರೊಂದಿಗೆ ಮಾತನಾಡಿದ್ದರು ಉಡುಗೊರೆಯಾಗಿ ಏನು ಕೇಳು ಎಂದು ಕೇಳಿದ್ದರು. ಇದಕ್ಕೆ ಪ್ರತಿಕ್ರಿಯಿಸಿದ ಗಣೇಶ್ ಅಕ್ಷಯ್ಗೆ 1,600 ಕಿರಿಯ ನೃತ್ಯ ಸಂಯೋಜಕರು ಮತ್ತು ವಯಸ್ಸಾದ ಡ್ಯಾನ್ಸರ್ಸ್ ಮತ್ತು ಸುಮಾರು 2,000 ಬ್ಯಾಗ್ರೌಂಡ್ ಡ್ಯಾನ್ಸರ್ಸ್ಗೆ ಒಂದು ತಿಂಗಳ ಪಡಿತರ ಸಹಾಯ ಮಾಡಬಹುದೆಂದು ಕೇಳಿದ್ದರು.
ಗಣೇಶ್ ಆಚಾರ್ಯ ಫೌಂಡೇಶನ್ ಮೂಲಕ ಕಲಾವಿದರಿಗೆ ಸಹಾಯ ಮಾಡಲು ಅಕ್ಷಯ್ ಒಪ್ಪಿಕೊಂಡಿದ್ದಾರೆ. ಕೊರಿಯೋಗ್ರಾಫರ್ ತನ್ನ ಪತ್ನಿ ಆಹಾರದ ಪ್ಯಾಕಿಂಗ್ ಮತ್ತು ವಿತರಣೆಯನ್ನು ನೋಡಿಕೊಳ್ಳುತ್ತಾರೆ.
ಕೊರೊನ ಮಹಾಮಾರಿ:
ಕೊರೊನ ವೈರಸ್ ಹರಡಲು ಬೇಕಾಗಿರುವುದು ನಮ್ಮ ಸಹಾಯ ಆದರೆ ಹರಡದಂತೆ ಮಾಡಬೇಕಾಗಿರುದು ನಮ್ಮ ಸಹಕಾರ”.
ತಪ್ಪದೇ ಹೊರಗೆ ಹೋದಾಗ ಸ್ವಚ್ಛವಾದ ಮಾಸ್ಕ ಧರಿಸಿ.
ಸಾರ್ವಜನಿಕ ಸ್ಥಳಗಳಲ್ಲಿ ಸಾಮಾಜಿಕ ಅಂತರ ಕಾಪಾಡಿಕೊಳ್ಳಿ .
ಜನ ನಿಬಿಡ ಪ್ರದೇಶದಿಂದ ದೂರವಿರಿ.
ಮನೆ ಸಮೀಪದ ಅಂಗಡಿಯಲ್ಲಿ ಫೋನ್ ಮೂಲಕ ತಮಗೆ ಬೇಕಾದ ದಿನಸಿ ಮತ್ತು ಇತರ ವಸ್ತುಗಳನ್ನು ಪಟ್ಟಿ ಮಾಡಿ ನಿರ್ದಿಷ್ಟ ಸಮಯ ಗೊತ್ತು ಮಾಡಿ.
ನಿಮ್ಮ ಮನೆಗೆ ನೀವೇ ಲಕ್ಷ್ಮಣ ರೇಖೆ ಸೃಷ್ಟಿ ಮಾಡಿ.
ಅನಗತ್ಯ ಓಡಾಟ ಸಲ್ಲದು. ಹೊರಗಡೆ ಹೋಗಿ ಬಂದ ಮೇಲೆ ಬಟ್ಟೆ ಬದಲಾಯಿಸಿ ಸ್ನಾನ ಮಾಡಿ.
ನಮ್ಮ ಹೋರಾಟ ಕೊರೊನ ನಿರ್ಮೂಲನೆಯತ್ತ.
ಇದು ಸಾಕ್ಷ ಟಿವಿಯ ಕಳಕಳಿಯ ವಿನಂತಿ.








