ನೀಲಿ ಚಿತ್ರ ನಿರ್ಮಾಣ – ಶಿಲ್ಪಾ ಶೆಟ್ಟಿ ಪತಿ ರಾಜ್ ಕುಂದ್ರಾ ಅರೆಸ್ಟ್…!
ಬಾಲಿವುಡ್ ನ ಸ್ಟಾರ್ ನಟಿ ಶಿಲ್ಪಾ ಶೆಟ್ಟಿ ಅವರ ಪತಿ , ಉದ್ಯಮಿ ರಾಜ್ ಕುಂದ್ರಾ ಅವರನ್ನು ಮುಂಬೈ ಪೊಲೀಸರು ಭಾನುವಾರ ರಾತ್ರಿ ಬಂಧಿಸಿದ್ದಾರೆ. ಅಶ್ಲೀಲ ವಿಡಿಯೋ ಚಿತ್ರೀಕರಣ ಮತ್ತು ಮಾರಾಟ ಜಾಲಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ರಾಜ್ ಕುಂದ್ರಾ ಅರೆಸ್ಟ್ ಮಾಡಲಾಗಿದೆ. ಅಲ್ಲದೇ ಅಶ್ಲೀಲ ವಿಡಿಯೋ ಚಿತ್ರೀಕರಣ ಮತ್ತು ಮಾರಾಟ ಜಾಲ ಪ್ರಕರಣದ ಮುಖ್ಯ ಆರೋಪಿ ರಾಜ್ ಕುಂದ್ರಾ ಎಂದು ಮುಂಬೈ ಪೊಲೀಸರು ಹೇಳಿದ್ದಾರೆ.
ಅಶ್ಲೀಲ ವಿಡಿಯೋಗಳನ್ನು ಚಿತ್ರೀಕರಿಸಿ ಅವುಗಳನ್ನು ಕೆಲವು ಆಪ್ ಗಳ ಮೂಲಕ ಅಪಲೋಡ್ ಮಾಡಿಸುತ್ತಿದ್ದ ಬಗ್ಗೆ ಕೆಲವು ತಿಂಗಳಿಂದಲೂ ಮುಂಬೈ ಪೊಲೀಸರು ತನಿಖೆ ಚುರುಕುಗೊಳಿಸಿದ್ದರು. ಇದೇ ರೀತಿಯ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ಕಾಸ್ಟಿಂಗ್ ನಿರ್ದೇಶಕನೊಬ್ಬ ಹಾಗೂ ಯುವತಿಯೊಬ್ಬರನ್ನು ಮುಂಬೈ ಪೊಲೀಸರು ಇತ್ತೀಚೆಗೆ ಬಂಧಿಸಿದ್ದರು. ಇದೀಗ ರಾಜ್ ಕುಂದ್ರಾ ಬಂಧನವಾಗಿದೆ.. ಈ ಬಗ್ಗೆ ಮಾಹಿತಿ ನೀಡಿರುವ ಮುಂಬೈ ಪೊಲೀಸರು ರಾಜ್ ಕುಂದ್ರ ವಿರುದ್ಧ ಅಗತ್ಯ ಸಾಕ್ಷ್ಯ ಇದ್ದ ಕಾರಣ ಅವರನ್ನು ಬಂಧಿಸಲಾಗಿದೆ ಎಂದಿದ್ದಾರೆ.
ನೀಲಿ ಚಿತ್ರಗಳನ್ನು ಚಿತ್ರೀಕರಿಸಿ ಅವುಗಳನ್ನು ವಿದೇಶಿ ಸರ್ವರ್ಗಳನ್ನು ಬಳಸಿ ಮೊಬೈಲ್ ಆಪ್ಗಳಿಗೆ ಅಪ್ಲೋಡ್ ಮಾಡಲಾಗುತ್ತಿತ್ತು. ಈ ಬಗ್ಗೆ ಇದೇ ಫೆಬ್ರವರಿಯಲ್ಲಿ ಮುಂಬೈ ಸೈಬರ್ ಕ್ರೈಂನಲ್ಲಿ ದೂರು ದಾಖಲಾಗಿತ್ತು. ಪ್ರಕರಣದ ತನಿಖೆಯನ್ನು ಕ್ರೈಂ ಬ್ರ್ಯಾಂಚ್ ಮಾಡಿದ್ದು, ಪ್ರಕರಣದ ಮುಖ್ಯ ರೂವಾರಿಯಾದ ರಾಜ್ ಕುಂದ್ರಾ ಅನ್ನು ಬಂಧಿಸಲಾಗಿದೆ ಎಂದಿದ್ದಾರೆ.