ಜಾತಿ ನಿಂದನೆ ಆರೋಪ – ಗಣೇಶ್ ಗೆ ನಾಯಕಿಯಾಗಿದ್ದ ಯುವಿಕಾ ವಿರುದ್ಧ FIR
ಮುಂಬೈ : ಬಾಲಿವುಡ್ ನಟಿ ಯುವಿಕಾ ಚೌಧರಿ ವಿರುದ್ಧ ಜಾತಿ ನಿಂದನೆ ಆರೋಪದಡಿ FIR ದಾಖಲಾಗಿದೆ. ವಿಡಿಯೋವೊಂದರಲ್ಲಿ ಒಂದು ಸಮುದಾಯದ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿ ಅವಮಾನ ಮಾಡಿಇರೋದಾಗಿ ನಟಿ ವಿರುದ್ಧ ದೂರು ದಾಖಲಾಗಿದೆ. ದಲಿತ ಹಕ್ಕುಗಳ ಹೋರಾಟಗಾರರು ದೂರು ನೀಡಿದ್ದು, ಹರಿಯಾಣ ಪೊಲೀಸರು ನಟಿ ವಿರುದ್ಧ ಎಫ್ ಐ ಆರ್ ದಾಖಲಿಸಿದ್ದಾರೆ. ಪರಿಶಿಷ್ಟ ಜಾತಿ ಸಮುದಾಯದ ಬಗ್ಗೆ ಕೆಲವು ಅವಹೇಳನಕಾರಿ ಹೇಳಿಕೆಗಳನ್ನು ನೀಡಿದ್ದಾರೆ ಎಂದು ದಲಿತ ಹಕ್ಕುಗಳ ಹೋರಾಟಗಾರ ರಜತ್ ಕಲ್ಸನ್ ದೂರಿನಲ್ಲಿ ಆರೋಪಿಸಿದ್ದಾರೆ.
ಮೇ 25 ರಂದು ನಟಿ ಯುವಿಕಾ ಚೌಧರಿ ವಿಡಿಯೋವೊಂದನ್ನು ಶೇರ್ ಮಾಡಿದ್ದರು. ಪತಿ ಪ್ರಿನ್ಸ್ ನರುಲಾ ಮನೆಯಲ್ಲಿ ಹೇರ್ ಸ್ಟೈಲ್ ಮಾಡಿಸಿಕೊಳ್ಳುತ್ತಿದ್ದ ವಿಡಿಯೋದಲ್ಲಿ ಮಾತನಾಡುವ ಸಂದರ್ಭದಲ್ಲಿ ಸಮುದಾಯವೊಂದರ ಬಗ್ಗೆ ಉಲ್ಲೇಖಿಸಿದ್ದರು. ಇದ್ರಿಂದಾಗಿ ನೆಟ್ಟಿಗರು ನಟಿ ವಿರುದ್ಧ ತೀವ್ರ ಆಕ್ರೋಶ ಹೊರಹಾಕಿದ್ದರು. ಕೆಲವೊಂದು ಸಮುದಾಯದವರ ಕೆಂಗಣ್ಣಿಗೂ ಗುರಿಯಾಗಿದ್ದಾರೆ. ಬಂಧಿಸುವಂತೆ ಆಗ್ರಹವೂ ಹೆಚ್ಚಾಗಿದೆ..
ಇನ್ನೂ ವಿಡಿಯೋ ಕುರಿತು ತೀವ್ರ ಆಕ್ರೋಶ ವ್ಯಕ್ತವಾದ ಬೆನ್ನಲ್ಲೇ ಯುವಿಕಾ ಕ್ಷಮೆಯಾಚಿಸಿದ್ದಾರೆ.. ಜೊತೆಗೆ ಯಾಕೆಯ ಪತಿ ನಟ ಪ್ರಿನ್ಸ್ ಸಹ ಪತ್ನಿ ಪರ ಕ್ಷಮೆ ಕೋರಿದ್ಆರೆ. ಅಲ್ಲದೇ ನಟಿ ವಿಡಿಯೋ ಸಹ ಡಿಲೀಟ್ ಮಾಡಿದ್ದಾರೆ. ಈ ಬಗ್ಗೆ ಪ್ರತಿಕ್ರಿಯಿಸಿ ‘ನಾನು ಉದ್ದೇಶಪೂರ್ವಕವಾಗಿ ಅಥವಾ ಯಾವುದೇ ಸಮುದಾಯದವರಿಗೆ ಬೇಸರ ತರಿಸಬೇಕೆಂದು ವಿಡಿಯೋ ಮಾಡಲಿಲ್ಲ. ನಾನು ಬಳಸಿದ ಪದದ ಅರ್ಥವೂ ನನಗೆ ಗೊತ್ತಿರಲಿಲ್ಲ. ನನ್ನ ಮಾತಿನಿಂದ ಯಾರಿಗಾದರೂ ಬೇಸರವಾಗಿದ್ದರೆ ಕ್ಷಮಿಸಿಬಿಡಿ ಎಂದು ಸ್ಪಷ್ಟನೆ ನೀಡಿದ್ದಾರೆ. ಯುವಿಕಾ ಚೌಧರಿ ಕನ್ನಡದಲ್ಲಿ 2009ರಲ್ಲಿ ಗಣೇಶ್ ಗೆ ನಾಯಕಿಯಾಗಿ ‘ಮಳೆಯಲಿ ಜೊತೆಯಲಿ’ ಚಿತ್ರದಲ್ಲಿ ಅಭಿನಯಿಸಿದ್ದರು.
ಕೊರೊನ ಮಹಾಮಾರಿ:
ಕೊರೊನ ವೈರಸ್ ಹರಡಲು ಬೇಕಾಗಿರುವುದು ನಮ್ಮ ಸಹಾಯ ಆದರೆ ಹರಡದಂತೆ ಮಾಡಬೇಕಾಗಿರುದು ನಮ್ಮ ಸಹಕಾರ”.
ತಪ್ಪದೇ ಹೊರಗೆ ಹೋದಾಗ ಸ್ವಚ್ಛವಾದ ಮಾಸ್ಕ ಧರಿಸಿ.
ಸಾರ್ವಜನಿಕ ಸ್ಥಳಗಳಲ್ಲಿ ಸಾಮಾಜಿಕ ಅಂತರ ಕಾಪಾಡಿಕೊಳ್ಳಿ .
ಜನ ನಿಬಿಡ ಪ್ರದೇಶದಿಂದ ದೂರವಿರಿ.
ಮನೆ ಸಮೀಪದ ಅಂಗಡಿಯಲ್ಲಿ ಫೋನ್ ಮೂಲಕ ತಮಗೆ ಬೇಕಾದ ದಿನಸಿ ಮತ್ತು ಇತರ ವಸ್ತುಗಳನ್ನು ಪಟ್ಟಿ ಮಾಡಿ ನಿರ್ದಿಷ್ಟ ಸಮಯ ಗೊತ್ತು ಮಾಡಿ.
ನಿಮ್ಮ ಮನೆಗೆ ನೀವೇ ಲಕ್ಷ್ಮಣ ರೇಖೆ ಸೃಷ್ಟಿ ಮಾಡಿ.
ಅನಗತ್ಯ ಓಡಾಟ ಸಲ್ಲದು. ಹೊರಗಡೆ ಹೋಗಿ ಬಂದ ಮೇಲೆ ಬಟ್ಟೆ ಬದಲಾಯಿಸಿ ಸ್ನಾನ ಮಾಡಿ.
ನಮ್ಮ ಹೋರಾಟ ಕೊರೊನ ನಿರ್ಮೂಲನೆಯತ್ತ.
ಇದು ಸಾಕ್ಷ ಟಿವಿಯ ಕಳಕಳಿಯ ವಿನಂತಿ.