ಬಾಲಿವುಡ್ ಹಿರಿಯ ನಟ ರಿಷಿ ಕಪೂರ್(67) ನಿಧನರಾಗಿದ್ದಾರೆ. ಕ್ಯಾನ್ಸರ್ ಹಾಗೂ ಉಸಿರಾಟದ ತೊಂದರೆಯಿಂದ ಬಳಲುತ್ತಿದ್ದ ರಿಷಿ ಕಪೂರ್ ಅವರನ್ನು ಮುಂಬೈ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಇದೀಗ ಚಿಕಿತ್ಸೆ ಫಲಕಾರಿಯಾಗದೆ ವಿಧಿವಶರಾಗಿದ್ದಾರೆ. ರಿಷಿ ಕಪೂರ್ ಅವರನ್ನು ಬುಧವಾರ ಬೆಳಿಗ್ಗೆ ಅವರ ಕುಟುಂಬ ಹೆಚ್ ಎನ್ ರಿಲಯನ್ಸ್ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು.
ಸುಮಾರು ಒಂದು ವರ್ಷ ಯುಎಸ್ ನಲ್ಲಿ ಕ್ಯಾನ್ಸರ್ಗೆ ಚಿಕಿತ್ಸೆ ಪಡೆದ ನಂತರ ನಟ ರಿಷಿ ಕಪೂರ್ ಕಳೆದ ಸೆಪ್ಟೆಂಬರ್ ನಲ್ಲಿ ಭಾರತಕ್ಕೆ ಮರಳಿದರು. ಈ ಬಗ್ಗೆ ಟ್ವೀಟ್ ಮಾಡಿರುವ ನಟ ಅಮಿತಾಬ್ ಬಚ್ಚನ್, ರಿಷಿ ಕಪೂರ್ ಇನ್ನಿಲ್ಲ ಎಂದು ಬರೆದುಕೊಂಡಿದ್ದಾರೆ.
ಅರವಿಂದ ಅವೇಂಜರ್ಸ್ಗೆ ಬಿ ಝೆಡ್ ಕಪ್ ಮೀಡಿಯಾ ಕ್ರಿಕೆಟ್ ಟ್ರೋಫಿ
ಬೆಂಗಳೂರು: ಅಮೋಘ ಆಟ ಪ್ರದರ್ಶಿಸಿದ ಅರವಿಂದ ಅವೇಂಜರ್ಸ್ ತಂಡವು ಬಿ ಝೆಡ್ ಕಪ್ ಮೀಡಿಯಾ ಕ್ರಿಕೆಟ್ ಟ್ರೋಫಿಯನ್ನು ಮುಡಿಗೇರಿಸಿಕೊಂಡಿದೆ. 9ಡ್ರೀಮ್ಸ್ ಸಂಸ್ಥೆ ಆಯೋಜಿಸಿದ್ದ ಕ್ರಿಕೆಟ್ ಟೂರ್ನಿಯ ಫೈನಲ್ ಪಂದ್ಯದಲ್ಲಿ...








