ಇಸ್ಲಾಮಾಬಾದ್: ಪಾಕಿಸ್ತಾನದಲ್ಲಿ ಪ್ರಭಲ ಬಾಂಬ್ ಸ್ಫೋಟವಾಗಿದ್ದು, 26 ಜನರು ಸಾವನ್ನಪ್ಪಿರುವ ಘಟನೆ ಸಂಸತ್ ಚುನಾವಣೆಗೂ (Parliamentary Election) ಮುನ್ನಾ ದಿನ ನಡೆದಿದೆ.
ಬಲೂಚಿಸ್ತಾನ್ ಪ್ರಾಂತ್ಯದ ಪಿಶಿನ್ ಜಿಲ್ಲೆಯಲ್ಲಿಯೇ ಈ ದಾಳಿ ಸಂಭವಿಸಿದ್ದು, ಸ್ವತಂತ್ರ ಅಭ್ಯರ್ಥಿಯ ಚುನಾವಣಾ ಕಚೇರಿಯಲ್ಲಿ ಎರಡು ಬಾಂಬ್ ಸ್ಫೋಟಗಳು ಸಂಭವಿಸಿವೆ. ಕನಿಷ್ಠ 26 ಜನ ಸಾವನ್ನಪ್ಪಿದ್ದಾರೆ. ಅಲ್ಲದೇ, ಘಟನೆಯಲ್ಲಿ 12ಕ್ಕೂ ಅಧಿಕ ಜನರು ಗಾಯಗೊಂಡಿದ್ದಾರೆ ಎಂದು ತಿಳಿದು ಬಂದಿದೆ.
ಚುನಾವಣಾ ನೀತಿ ಸಂಹಿತೆ ಜಾರಿಯಾಗಿದ್ದರೂ ಪಕ್ಷಗಳು ತಮ್ಮ ಪ್ರಚಾರದಲ್ಲಿ ನಿರತರಾಗಿದ್ದ ಸಂದರ್ಭದಲ್ಲಿ ಈ ದಾಳಿ ನಡೆದಿದೆ ಎನ್ನಲಾಗಿದೆ. ಬಲೂಚಿಸ್ತಾನದಲ್ಲಿ ಇತ್ತೀಚೆಗೆ ಉಗ್ರರ ದಾಳಿಗಳು ಹೆಚ್ಚಾಗುತ್ತಿವೆ. ಶಾಂತಿ ಕಾಪಾಡುವ ನಿಟ್ಟಿನಲ್ಲಿ ಪಾಕಿಸ್ತಾನದಾದ್ಯಂತ ಪೊಲೀಸ್ ಮತ್ತು ಅರೆಸೈನಿಕ ಪಡೆಗಳನ್ನು ನಿಯೋಜಿಸಲಾಗಿದೆ. ಆದರೂ ಸ್ಫೋಟವಾಗುತ್ತಿರುವುದು ಆತಂಕಕ್ಕೆ ಕಾರಣವಾಗಿದೆ.