ತಿರುವನಂತಪುರಂ: ಕೇರಳದಲ್ಲಿ ಬಾಂಬ್ ಸ್ಪೋಟವಾಗಿದ್ದು, ಓರ್ವ ವ್ಯಕ್ತಿ ಬಲಿಯಾಗಿರುವ ಘಟನೆ ನಡೆದಿದೆ.
ಈ ಘಟನೆ ಎರ್ನಾಕುಲಂನ (Ernakulam, Kerala) ಕಲಮಶ್ಶೇರಿಯಲ್ಲಿ (Kalamassery) ನಡೆದಿದೆ. ಈ ಪ್ರದೇಶದಲ್ಲಿ ಮೂರು ಪ್ರಬಲ ಸ್ಫೋಟ ಉಂಟಾಗಿವೆ. ಪರಿಣಾಮ ಓರ್ವ ವ್ಯಕ್ತಿ ಸ್ಥಲದಲ್ಲಿಯೇ ಸಾವನ್ನಪ್ಪಿದ್ದಾರೆ. ಅಲ್ಲದೇ, 6 ಜನ ಗಂಭೀರವಾಗಿ ಗಾಯಗೊಂಡಿದ್ದು, ಐಸಿಯುನಲ್ಲಿ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಭಾನುವಾರ ಪ್ರೇಯರ್ ಗಾಗಿ ಸುಮಾರು 2,500 ಜನರು ಈ ಸ್ಥಳದಲ್ಲಿ ಸೇರಿದ್ದರು. ಈ ಸಂದರ್ಭದಲ್ಲಿ ಪ್ರೇಯರ್ ಹಾಲ್ ನಲ್ಲಿ ಸ್ಪೋಟಗೊಂಡಿದೆ. ಘಟನೆಯಿಂದ ಗಾಬರಿಗೊಂಡು ಜನ ದಿಕ್ಕಾಪಾಲಾಗಿ ಓಡಿದ್ದಾರೆ. ಪ್ರಾರ್ಥನಾ ಮಂದಿರವನ್ನೇ ಗುರಿಯಾಗಿಸಿಕೊಂಡು ಹಾಗೂ ಸ್ಫೋಟದ ಹಿಂದೆ ಭಯೋತ್ಪಾದಕ ಕೃತ್ಯ ಶಂಕೆ ಇದೆ.
ಈ ಕುರಿತು ಕೇರಳ ಸಿಎಂ ಪ್ರತಿಕ್ರಿಯೆ ನೀಡಿದ್ದು, ಸಮಾವೇಶದ ಸಂದರ್ಭದಲ್ಲಿ ಸಂಭವಿಸಿದ ಸ್ಫೋಟ ದುರದೃಷ್ಟಕರ. ಸ್ಫೋಟದ ಹಿಂದಿನ ಕಾರಣ ತಿಳಿದು ಬಂದಿಲ್ಲ. ಈ ಕುರಿತು ತನಿಖೆ ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ.








