ಕೋಲ್ಕತ್ತಾ: ಕೊಳದ ಪಕ್ಕದಲ್ಲಿ ಬಾಂಬ್ ಸ್ಫೋಟಗೊಂಡ ಪರಿಣಾಮ ಆಟವಾಡುತ್ತಿದ್ದ ಬಾಲಕ ಸಾವನ್ನಪ್ಪಿ, ಮತ್ತಿಬ್ಬರು ಬಾಲಕರು ಗಂಭೀರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ.
ಈ ಘಟನೆ ಪಶ್ಚಿಮ ಬಂಗಾಳದ (West Bengal) ಹೂಗ್ಲಿ (Hooghly) ಜಿಲ್ಲೆಯಲ್ಲಿ ನಡೆದಿದೆ. ಪಾಂಡುವಾ ನೇತಾಜಿಪಲ್ಲಿ ಎಂಬ ಕಾಲೋನಿಯ ಕೊಳದ ಪಕ್ಕದಲ್ಲಿ ಮಕ್ಕಳು ಆಟವಾಡುತ್ತಿದ್ದಾರೆ. ಈ ಸಂದರ್ಭದಲ್ಲಿ ಏಕಾಏಕಿ ಸ್ಫೋಟ ಸಂಭವಿಸಿದೆ. ಆಗ ಆಟವಾಡುತ್ತಿದ್ದ ಬಾಲಕ ಸಾವನ್ನಪ್ಪಿದರೆ, ಮತ್ತಿಬ್ಬರು ಅಪ್ರಾಪ್ತರು ಗಂಭೀರವಾಗಿ ಗಾಯಗೊಂಡಿದ್ದಾರೆ ಎನ್ನಲಾಗಿದೆ. ರಾಜ್ ಬಿಸ್ವಾಸ್ ಸಾವನ್ನಪ್ಪಿದ ಬಾಲಕ ಎನ್ನಲಾಗಿದೆ. ರೂಪಮ್ ಬಲ್ಲವ್ (13) ಮತ್ತು ಸೌರವ್ ಚೌಧರಿ (8) ಘಟನೆಯಲ್ಲಿ ಗಂಭೀರ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಿ, ಚಿಕಿತ್ಸೆ ನೀಡಲಾಗುತ್ತಿದೆ.
ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿರುವ ಮತ್ತಿಬ್ಬರು ಅಪ್ರಾಪ್ತರ ಪರಿಸ್ಥಿತಿ ಕೂಡ ಗಂಭೀರವಾಗಿದೆ ಎನ್ನಲಾಗಿದೆ. ಈ ಕುರಿತು ಪ್ರಕರಣ ದಾಖಲಿಸಿಕೊಂಡಿರುವ ಹೂಗ್ಲಿ ಗ್ರಾಮಾಂತರ ಪೊಲೀಸರು ಹೆಚ್ಚಿನ ತನಿಖೆ ಕೈಗೊಂಡಿದ್ದಾರೆ.