Bomb Threat : ಬೆಂಗಳೂರಿನ ಖಾಸಗಿ ಶಾಲೆಗೆ ಬಾಂಬ್ ಬೆದರಿಕೆ ; ಸ್ಥಳಕ್ಕೆ ಬಾಂಬ್ ಸ್ಕ್ವಾಡ್ ಭೇಟಿ…
ಬೆಂಗಳೂರಿನ ಖಾಸಗಿ ಶಾಲೆಗೆ ಬಾಂಬ್ ಬೆದರಿಕೆ ಇ-ಮೇಲ್ ಬಂದಿದೆ. ನಗರದ ರಾಜಾಜಿನಗರ 5ನೇ ಬ್ಲಾಕ್ನಲ್ಲಿರುವ ಎನ್ಪಿಎಸ್ ಶಾಲೆಗೆ ಅನಾಮಧೇಯ ವ್ಯಕ್ತಿಯಿಂದ ಶಾಲೆ ಆಡಳಿತ ಮಂಡಳಿಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ ಬಂದಿದೆ.
ಶಾಲೆ ಆವರಣದಲ್ಲಿ 4 ಜಿಲೆಟಿನ್ ಕಡ್ಡಿ ಇಟ್ಟಿರುವುದಾಗಿ ಇ-ಮೇಲ್ ಬಂದಿದೆ. ಬೆಳಗ್ಗೆ 11.30 ಮೇಲ್ ನೋಡಿದ ಶಾಲೆ ಸಿಬ್ಬಂದಿ, ತಕ್ಷಣ ಬಸವೇಶ್ವರನಗರ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.ಕೂಡಲೇ ಸ್ಥಳಕ್ಕೆ ದೌಡಾಯಿಸಿದ ಬಸವೇಶ್ವರ ನಗರ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ, ಮಕ್ಕಳನ್ನ ಹೊರಗೆ ಕಳುಹಿಸಿ ಪರಿಶೀಲನೆ ನಡೆಸಿದ್ದಾರೆ.
ಡಾಗ್ ಸ್ಕ್ವಾಡ್ ಹಾಗೂ ಬಾಂಬ್ ನಿಷ್ಕ್ರಿಯ ದಳದ ಜೊತೆ ತಕ್ಷಣ ಪೊಲೀಸರು ಶಾಲೆಗೆ ತೆರಳಿದ್ದು, ಮಕ್ಕಳನ್ನ ಶಾಲೆಯಿಂದ ಹೊರಗೆ ಕಳುಹಿಸಿದ್ದಾರೆ. ವಿಜಯನಗರ ಎಸಿಪಿ ರವಿ ನೇತೃತ್ವದ ತಂಡ ಶಾಲೆಯಲ್ಲಿ ಪರಿಶೀಲನೆ ನಡೆಸುತ್ತಿದ್ದಾರೆ.
Bomb Threat: Bomb threat to a private school in Bangalore; Bomb squad visits the spot…