ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ (Bengaluru) ಮತ್ತೆ ಖಾಸಗಿ ಶಾಲೆಗೆ (School) ಬಾಂಬ್ ಬೆದರಿಕೆ ಹಾಕಿರುವ ಘಟನೆ ನಡೆದಿದೆ.
ದುಷ್ಕರ್ಮಿಗಳು ಮೇಲ್ ಮೂಲಕ ಬಾಂಬ್ ಬೆದರಿಕೆ (Bomb threat) ಹಾಕಿದ್ದಾರೆ. ಮೇಲ್ ವಿಷಯ ತಿಳಿಯುತ್ತಿದ್ದಂತೆ ಶಾಲೆಯ ಮುಖ್ಯ ಶಿಕ್ಷಕರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಕೂಡಲೇ ಸ್ಥಳಕ್ಕೆ ಆಗಮಿಸಿದ ಪೊಲೀಸರು ಸ್ಥಳ ಪರಿಶೀಲನೆ ನಡೆಸಿದ್ದಾರೆ.
ಬೆಂಗಳೂರಿನ ಗೋವಿಂದಪುರ ಠಾಣಾ ವ್ಯಾಪ್ತಿಯ ಖಾಸಗಿ ಶಾಲೆಗೆ ಬಾಂಬ್ ಬೆದರಿಕೆಯ ಮೇಲ್ ಬಂದಿದೆ. ಗುರುವಾರ ಬೆಳಿಗ್ಗೆ ದು,ಕರ್ಮಿಗಳು ಮೇಲ್ ಮಾಡಿದ್ದಾರೆ. ಶಾಲೆಯ ಆವರಣದಲ್ಲಿ ಐದು ಪೈಪ್ ಲೈನ್ ಬಾಂಬ್ ಗಳನ್ನು ಇಡಲಾಗಿದೆ. ಮಧ್ಯಾಹ್ನ ಬ್ಲಾಸ್ಟ್ ಆಗಲಿದೆ ಎಂದು ಮೇಲ್ ಮಾಡಿದ್ದಾರೆ.
ಪೊಲೀಸರು ಹಾಗೂ ಬಾಂಬ್ ನಿಷ್ಕ್ರಿಯ ದಳದಿಂದ ಪರಿಶೀಲನೆ ನಡೆಸಿದ್ದಾರೆ. ಪರಿಶೀಲನೆ ವೇಳೆ ಯಾವುದೇ ಅನುಮಾನಾಸ್ಪದ ವಸ್ತುಗಳು ಪತ್ತೆಯಾಗಿಲ್ಲ. ಈ ಕುರಿತು ದೂರು ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಕೈಗೊಂಡಿದ್ದಾರೆ.








