ಚೆನ್ನೈನ 5 ಖಾಸಗಿ ಶಾಲೆ(Private School)ಗಳಿಗೆ ಅಪರಿಚಿತ ದುಷ್ಕರ್ಮಿ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ (Bomb Threat)ಯ ಸಂದೇಶ ಕಳುಸಿದ್ದು, ಆತಂಕ ವ್ಯಕ್ತವಾಗಿದೆ.
ಗೋಪಾಲಪುರಂ, ಜೆಜೆ ನಗರ, ಆರ್ಎ ಪುರಂ, ಅಣ್ಣಾನಗರ, ಪರಿಮಳ ಶಾಲೆಗಳಿಗೆ ಬೆದರಿಕೆ ಹಾಕಲಾಗಿದೆ. ಸುದ್ದಿ ತಿಳಿಯುತ್ತಿದ್ದಂತೆ ಪೊಲೀಸ್ ಇಲಾಖೆ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಪೋಷಕರು ಭಯದಿಂದ ಮಕ್ಕಳನ್ನು ಕರೆದುಕೊಂಡು ಹೋಗಿದ್ದಾರೆ. ಸದ್ಯ ಸಂದೇಶ ಕಳುಹಿಸಿದ ಆರೋಪಿಗಾಗಿ ಪೊಲೀಸರು ಹುಡುಕಾಟ ನಡೆಸಿದ್ದಾರೆ.
ರಾಷ್ಟ್ರ ರಾಜಧಾನಿ ದೆಹಲಿಯ ಆರ್ಕೆ ಪುರಂ ಪ್ರದೇಶದ ದೆಹಲಿ ಪಬ್ಲಿಕ್ ಸ್ಕೂಲ್ಗೆ ಕೂಡ ಬಾಂಬ್ ಬೆದರಿಕೆ (Bomb Threat) ಕರೆ ಬಂದಿವೆ. ಮುಂಬೈನ 6 ಸ್ಥಳಗಳಲ್ಲಿ ಬಾಂಬ್ ಇಟ್ಟಿರುವುದಾಗಿ ಮುಂಬೈ ಟ್ರಾಫಿಕ್ ಪೊಲೀಸ್ ಕಂಟ್ರೋಲ್ ರೂಂಗೆ ಅಪರಿಚಿತರು ಬೆದರಿಕೆ ಕರೆ ಮಾಡಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ. ಸದ್ಯ ಈ ಕುರಿತು ಪೊಲೀಸ್ ಇಲಾಖೆ ಅಲರ್ಟ್ ಆಗಿದೆ.