ದೆಹಲಿಯಿಂದ (Delhi) ಪುಣೆಗೆ (Pune) ಹೊರಟಿದ್ದ ವಿಸ್ತಾರಾ UK971 ವಿಮಾನಕ್ಕೆ (Flight) ಬಾಂಬ್ ಬೆದರಿಕೆ ಕರೆ (Bomb Threat Call) ಮಾಡಿರುವ ಘಟನೆ ನಡೆದಿದೆ.
ಬೆಳಗ್ಗೆ 7:30ರ ಸುಮಾರಿಗೆ ಬೋರ್ಡಿಂಗ್ ಪ್ರಗತಿಯಲ್ಲಿದ್ದ ವೇಳೆಯೇ ಜಿಎಂಆರ್ ಕಾಲ್ ಸೆಂಟರ್ಗೆ ಕರೆ ಮಾಡಿರುವ ಅಪರಿಚಿತರು ಬಾಂಬ್ ಬೆದರಿಕೆ ಹಾಕಿದ್ದಾರೆ. ಕರೆ ಬೆನ್ನಲ್ಲಿಯೇ ಬೋರ್ಡಿಂಗ್ ನಿಲ್ಲಿಸಿ, ಪ್ರತ್ಯೇಕವಾದ ಸ್ಥಳದಲ್ಲಿ ವಿಮಾನದ ತಪಾಸಣೆ ಮಾಡಲಾಗಿದೆ. ಬಾಂಬ್ ನಿಷ್ಕ್ರಿಯ ದಳ ಮತ್ತು ವಿಶೇಷ ಭದ್ರತಾ ತಂಡಗಳು ವಿಮಾನ ಪರಿಶೀಲನೆ ಮಾಡಿದ್ದು ಯಾವುದೇ ಅನುಮಾನಸ್ಪದ ವಸ್ತುಗಳು ಪತ್ತೆಯಾಗಿಲ್ಲ ಎನ್ನಲಾಗಿದೆ.
ಪ್ರಯಾಣಿಕರು ಮತ್ತು ಅವರ ಲಗೇಜುಗಳನ್ನು ಸುರಕ್ಷಿತವಾಗಿಡಲಾಗಿದೆ. ಪ್ರಯಾಣಿಕರಿಗೆ ಉಪಹಾರ ನೀಡುವುದು ಸೇರಿದಂತೆ ಅನಾನುಕೂಲತೆಯನ್ನು ಕಡಿಮೆ ಮಾಡಲು ನಾವು ಎಲ್ಲಾ ಪ್ರಯತ್ನಗಳನ್ನು ಮಾಡುತ್ತಿದ್ದೇವೆ ಎಂದು ವಕ್ತಾರರು ತಿಳಿಸಿದ್ದಾರೆ.