ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಇತ್ತೀಚೆಗೆ ಬಾಂಬ್ ಬೆದರಿಕೆಯ ಕರೆಗಳು ಹೆಚ್ಚಾಗಿ ಬರುತ್ತಿವೆ,. 9 ದಿನಗಳಲ್ಲಿ 5ನೇ ಬಾಂಬ್ ಬೆದರಿಕೆ ಬಂದಿದೆ.
ದಕ್ಷಿಣ ದೆಹಲಿಯ ಇಂಡಿಯನ್ ಪಬ್ಲಿಕ್ ಸ್ಕೂಲ್ ಹಾಗೂ ವಾಯುವ್ಯ ದೆಹಲಿಯ ಸರಸ್ವತಿ ವಿಹಾರ್ ಪ್ರದೇಶದ ಕ್ರೆಸೆಂಟ್ ಪಬ್ಲಿಕ್ ಸ್ಕೂಲ್‌ನಿಂದ ಕರೆ ಮಾಡಿ ಇಂದು (ಡಿ.17) ಬೆಳಿಗ್ಗೆ ಬಾಂಬ್ ಬೆದರಿಕೆ ಕರೆ ಬಂದಿರುವುದಾಗಿ ಮಾಹಿತಿ ಸಿಕ್ಕಿದೆ.
ಪೊಲೀಸರು, ಅಗ್ನಿಶಾಮಕ ದಳ, ಬಾಂಬ್ ನಿಷ್ಕ್ರೀಯ ದಳ ಹಾಗೂ ಶ್ವಾನ ದಳದ ಸಿಬ್ಬಂದಿ ಸ್ಥಳಗಳಕ್ಕೆ ದೌಡಾಯಿಸಿದ್ದು, ಪರಿಶೀಲನೆ ನಡೆಸಿದ್ದಾರೆ. ಆರು ಶಾಲೆಗಳಿಗೆ ಡಿ.13 ರಂದು ಮುಂಜಾನೆ ಬಾಂಬ್ ಬೆದರಿಕೆ ಕರೆ ಬಂದಿತ್ತು. ಡಿ.9 ರಂದು ಇದೇ ರೀತಿಯ ಬೆದರಿಕೆ ಕರೆ ಬಂದಿತ್ತು. 44 ಶಾಲೆಗಳು ಬಾಂಬ್ ಬೆದರಿಕೆ ಇಮೇಲ್‌ಗಳನ್ನು ಸ್ವೀಕರಿಸಿದ್ದವು. ಎಲ್ಲವೂ ಹುಸಿ ಬಾಂಬ್ ಎಂಬುವುದು ಪತ್ತೆಯಾಗಿತ್ತು. ಈಗ ಮತ್ತೆ ಅದೇ ರೀತಿಯ ಕರೆ ಬಂದಿದ್ದು, ಪೋಷಕರು ಆತಂಕ ವ್ಯಕ್ತಪಡಿಸುತ್ತಿದ್ದಾರೆ.








