ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿನ ವಿಶ್ವೇಶ್ವರಯ್ಯ ಮ್ಯೂಸಿಯಂಗೆ (Visvesvaraya Museum) ಇ-ಮೇಲ್ ಮೂಲಕ ಬಾಂಬ್ ಬೆದರಿಕೆ (Bomb threat) ಹಾಕಿರುವ ಘಟನೆ ಬೆಳಕಿಗೆ ಬಂದಿದೆ.
ಈ ಕುರಿತು ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಯಲ್ಲಿ (Cubbon Park Police Station) ಪ್ರಕರಣ ದಾಖಲಾಗಿದ್ದು, ದುಷ್ಕರ್ಮಿಗಳ ವಿರುದ್ಧ ಎಫ್ ಐಆರ್ ದಾಖಲಾಗಿದೆ. ಮ್ಯೂಸಿಯಂನಲ್ಲಿ ಹಲವು ಸ್ಪೋಟಕಗಳನ್ನ ಮುಚ್ಚಿಡಲಾಗಿದ್ದು, ಬೆಳಗ್ಗೆ ಎಲ್ಲವೂ ಸ್ಪೋಟಗೊಳ್ಳುತ್ತವೆ ಎಂದು ಹಾಕಿ ಉಗ್ರ ಸಂಘಟೆನಯೊಂದರ (Terrorizers 111) ಹೆಸರನ್ನು ದುಷ್ಕರ್ಮಿಗಳು ಉಲ್ಲೇಖಿಸಿ ಬೆದರಿಕೆ ಹಾಕಿದ್ದಾರೆ ಎನ್ನಲಾಗಿದೆ. ಕೂಡಲೇ ಸಿಬ್ಬಂದಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಆಗಮಿಸಿರುವ ಪೊಲೀಸರು ಪರಿಶೀಲನೆ ನಡೆಸಿದ್ದಾರೆ.








