ಇಂದೋರ್: ಭಾರತ ತಂಡವು ಹೊಸಬರ ಆಟದಿಂದಾಗಿ ಆಫ್ಘಾನಿಸ್ತಾನ್ ವಿರುದ್ಧ ಭರ್ಜರಿ ಜಯ ದಾಖಲಿಸಿದೆ.
ಈ ಮೂಲಕ ಭಾರತ ತಂಡವು 2-0 ಮುನ್ನಡೆ ಸಾಧಿಸಿದೆ. ಈ ಪಂದ್ಯದಲ್ಲಿ ಭಾರತ ತಂಡ 6 ವಿಕೆಟ್ ಗಳ ಜಯ ಸಾಧಿಸಿದೆ.
ಭಾರತ ತಂಡಕ್ಕೆ ಆಪ್ಘಾನ್ ಕೂಡ ಉತ್ತಮ ಟಾರ್ಗೆಟ್ ನೀಡಿತ್ತು. 173 ರನ್ ಟಾರ್ಗೆಟ್ ಬೆನ್ನತ್ತಿದ ಭಾರತ 15.4 ಓವರ್‌ಗಳಲ್ಲಿ 4 ವಿಕೆಟ್ ಕಳೆದುಕೊಂಡು 173 ರನ್ ಗಳಿಸಿ ಗೆಲುವು ಪಡೆಯಿತು. ಯಶಸ್ವಿ ಜೈಸ್ವಾಲ್ ಹಾಗೂ ಶಿವಂ ದುಬೆ ಅರ್ಧ ಶತಕ ಬಾರಿಸಿ ಗೆಲುವಿನ ರೂವಾರಿಯಾದರು.
34 ಎಸೆತಗಳಲ್ಲಿ 6 ಸಿಕ್ಸ್, 5 ಬೌಂಡರಿಗಳ ನೆರವಿನಿಂದ ಜೈಸ್ವಾಲ್ 68 ರನ್ ಗಳಿಸಿದರು. 32 ಎಸೆತಗಳಲ್ಲಿ 4 ಸಿಕ್ಸರ್ ಹಾಗೂ 5 ಬೌಂಡರಿಗಳ ನೆರವಿನಿಂದ 63 ರನ್ ಬಾರಿಸಿ ಅಜೇಯರಾಗಿ ಉಳಿದರು. ನಾಯಕ ರೋಹಿತ್ ಶರ್ಮಾ ಈ ಪಂದ್ಯದಲ್ಲಿ ಕೂಡ ಶೂನ್ಯ ಸುತ್ತಿದರು. ವಿರಾಟ್ ಕೊಹ್ಲಿ 16 ಎಸೆತಗಳಲ್ಲಿ 29 ರನ್ ಗಳಿಸಿದರು.
ಟಾಸ್ ಸೋತು ಬ್ಯಾಟ್ ಮಾಡಿದ ಆಫ್ಘಾನಿಸ್ತಾನ ನಿಗದಿತ 20 ಓವರ್‌ಗಳಲ್ಲಿ 172 ರನ್ ಗಳಿಸಿತು. ಗುಲಬ್ದೀನ್ ನಯೀಬ್ 35 ಬಾಲ್‌ನಲ್ಲಿ 57 ರನ್ ಬಾರಿಸಿದರು. ಟೀಂ ಇಂಡಿಯಾ ಪರವಾಗಿ ಆರ್ಷದೀಪ್ ಸಿಂಗ್ ಮೂರು ವಿಕೆಟ್ ಉರುಳಿಸಿದರು.