1 ರಿಂದ 5 ನೇ ತರಗತಿ ಆರಂಭಿಸೋ ಬಗ್ಗೆ ಸಿಎಂ ಸ್ಪಷ್ಟನೆ
ಬೆಂಗಳೂರು : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ರಾಜ್ಯದಲ್ಲಿ ಒಂದರಿಂದ ಐದನೇ ತರಗತಿಯ ಭೌತಿಕ ತರಗತಿಗಳನ್ನು ಪುನರಾಂಭಿಸುವ ಬಗ್ಗೆ ಮಾಹಿತಿ ನೀಡಿದ್ದಾರೆ.
ರಾಜ್ಯದಲ್ಲಿ ಸದ್ಯ 8 ರಿಂದ 12 ತರಗತಿಯವರೆಗೂ ತರಗತಿಗಳನ್ನು ಆರಂಭಿಸಲಾಗಿದೆ. ಸೆಪ್ಟೆಂಬರ್ ಆರರಿಂದ 6-8ತರಗತಿಗಳು ಆರಂಭವಾಗಲಿವೆ. ಈ ಮಧ್ಯೆ 1 ರಿಂದ 5 ನೇ ತರಗತಿ ಭೌತಿಕ ತರಗತಿಗಳನ್ನು ಪುನರಾರಂಭಿಸುವ ಬಗ್ಗೆ ಚರ್ಚೆಗಳು ನಡೆಯುತ್ತಿದ್ದವು.
ಇದೀಗ ಈ ವಿಚಾರವಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಬೆಂಗಳೂರಿನಲ್ಲಿ ಪ್ರತಿಕ್ರಿಯೆ ನೀಡಿದ್ದು, ಸದ್ಯಕ್ಕೆ 1 ರಿಂದ 5 ನೇ ತರಗತಿ ಭೌತಿಕ ತರಗತಿಗಳನ್ನು ಪುನರಾರಂಭಿಸುವ ಬಗ್ಗೆ ಯಾವುದೇ ಚರ್ಚೆ ನಡೆದಿಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ.
ಸದ್ಯಕ್ಕೆ ನಾವು ರಾಜ್ಯದಲ್ಲಿ 1 ರಿಂದ 5 ನೇ ತರಗತಿ ಆರಂಭದ ಬಗ್ಗೆ ಯಾವುದೇ ಚರ್ಚೆ ಮಾಡಿಲ್ಲ. 6-8 ನೇ ತರಗತಿಗಳು ಹೇಗೆ ಹೋಗುತ್ತವೆ ಎಂಬುದರ ಆಧಾರದ ಮೇಲೆ, ನಾವು 1 ರಿಂದ 5 ನೇ ತರಗತಿ ಆರಂಭದ ಬಗ್ಗೆ ನಿರ್ಧರಿಸುತ್ತೇವೆ ಎಂದು ತಿಳಿಸಿದ್ದಾರೆ.