ಹಾವೇರಿ: ಉಪ ಚುನಾವಣೆಯ ಹಿನ್ನೆಲೆಯಲ್ಲಿ ಶಿಗ್ಗಾಂವಿಯಲ್ಲಿ ಮಾಜಿ ಸಿಎಂ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಅವರು ಸರತಿ ಸಾಲಿನಲ್ಲಿ ನಿಂತ ತಮ್ಮ ಹಕ್ಕು ಚಲಾಯಿಸಿದ್ದಾರೆ.
ಶಿಗ್ಗಾಂವಿ ಪಟ್ಟಣದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಜನರೊಟ್ಟಿಗೆ ಸರತಿ ಸಾಲಿನಲ್ಲಿ ನಿಂತು ಮತ ಚಲಾಯಿಸಿದ್ದಾರೆ. ಈ ಸಂದರ್ಭದಲ್ಲಿ ಕ್ಷೇತ್ರದ ಅಭ್ಯರ್ಥಿಯೂ ಆಗಿರುವ ಹಾಗೂ ಬೊಮ್ಮಾಯಿ ಅವರ ಪುತ್ರ ಭರತ್ ಬೊಮ್ಮಾಯಿ ಸಾಥ್ ನೀಡಿದ್ದಾರೆ.
ಮತದಾನಕ್ಕೂ ಮೊದಲು ಪುತ್ರ ಭರತ್ ಅವರೊಂದಿಗೆ ಬೊಮ್ಮಾಯಿ ಅವರು ಹುಬ್ಬಳ್ಳಿಯಲ್ಲಿ ದೇವಸ್ಥಾನಕ್ಕೆ ತೆರಳಿ ವಿಶೇಷ ಪೂಜೆ ಸಲ್ಲಿಸಿದರು. ಕಾಂಗ್ರೆಸ್ ಅಭ್ಯರ್ಥಿ ಯಾಸಿರ್ ಖಾನ್ ಪಠಾಣ್ ತಮ್ಮ ಕುಟುಂಬದೊಂದಿಗೆ ಬಂದು ಮತ ಚಲಾಯಿಸಿದ್ದಾರೆ. ಮಾಜಿ ಶಾಸಕ ಅಜ್ಜಂಫೀರ್ ಖಾದ್ರಿ ಕೂಡ ಮತದಾನ ಮಾಡಿದರು.








