Bommai’s PA : ಹನಿಟ್ರ್ಯಾಪ್ ಬಲೆಗೆ ಬಿದ್ದ ಸಿಎಂ ಬೊಮ್ಮಾಯಿ ಅವರ ಪಿಎ
ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರ ಪಿಎ ಹರೀಶ್ ಎಂಬುವವರನ್ನು ಹನಿಟ್ರ್ಯಾಪ್ ಮಾಡಿ ಸರ್ಕಾರದ ಮಹತ್ವದ ದಾಖಲೆಗಳನ್ನು ಪಡೆದುಕೊಂಡಿದ್ದಾರೆ ಎಂಬ ಮಾಹಿತಿ ಬಹಿರಂಗವಾಗಿದೆ. ರಾಜ್ಯದ ಶಕ್ತಿ ಸೌಧ ವಿಧಾನ ಸೌಧದಲ್ಲೇ ಹನಿಟ್ರ್ಯಾಪ್ ಮಾಡಲಾಗಿದೆ ಎಂಬ ಅನುಮಾನ ವ್ಯಕ್ತವಾಗಿದ್ದು, ವಿಧಾನಸೌಧದ ಡಿ ದರ್ಜೆ ನೌಕರೆಯಾಗಿರುವ ಮಹಿಳೆಯಿಂದ ಹನಿಟ್ರ್ಯಾಪ್ ನಡೆದಿದೆ ಎಂದು ಹೇಳಲಾಗುತ್ತಿದೆ.

ಜನ್ಮಭೂಮಿ ಫೌಂಡೇಶನ್ ಅಧ್ಯಕ್ಷ ನಟರಾಜ್ ಶರ್ಮಾ ವಿಧಾನಸೌಧ ಠಾಣೆಯಲ್ಲಿ ಈ ಬಗ್ಗೆ ದೂರು ನೀಡಿದ್ದಾರೆ. ಸಿಎಂ ಬೊಮ್ಮಾಯಿ ಅವರ ಪಿಎ ಹರೀಶ್ ಅವರನ್ನು, ವಿಧಾನಸೌಧದ ಡಿ ದರ್ಜೆ ನೌಕರಳಾಗಿರುವ ಯುವತಿ ಹನಿಟ್ರ್ಯಾಪ್ ಮಾಡಿದ್ದು, ಬಳಿಕ ಬ್ಲ್ಯಾಕ್ ಮೇಲ್ ಮೂಲಕ ಸಿಎಂ ಬೊಮ್ಮಾಯಿ ಸಹಿ ಮಾಡಿರುವ ಹಲವು ಮಹತ್ವದ ದಾಖಲೆಗಳನ್ನು ಪಡೆದು ವಿರೋಧ ಪಕ್ಷದ ನಾಯಕರಿಗೆ ನೀಡಲಾಗಿದೆ.
ಇದರ ಹಿಂದೆ ದೊಡ್ಡ ಜಾಲವೇ ಇದ್ದು, ಸಮಗ್ರ ತನಿಖೆಗೆ ಒತ್ತಾಯಿಸಿ, ನಟರಾಜ್ ಶರ್ಮಾ ಪೊಲೀಸ್ ಅಧಿಕಾರಿಗಳಿಗೆ ದೂರು ನೀಡಿದ್ದಾರೆ.
ಆರಂಭದಲ್ಲಿ ವಿಧಾನಸೌಧದಲ್ಲಿ ಡಿ ದರ್ಜೆ ನೌಕರಿ ಮಾಡುತ್ತಿರುವ ಮಹಿಳೆ, ಪಿಎ ಹರೀಶ್ ಜೊತೆ ಸಲುಗೆ ಬೆಳೆಸಿಕೊಂಡು ಬಳಿಕ ಹನಿಟ್ರ್ಯಾಪ್ ಮಾಡಿದ್ದಾಳೆ. ನಂತರ ಬ್ಲ್ಯಾಕ್ ಮೇಲ್ ಮೂಲಕ ಹಣ ಮತ್ತು ಸರ್ಕಾರಕ್ಕೆ ಸಂಬಂಧಿಸಿದ ದಾಖಲೆಗಳನ್ನು ಪಡೆದುಕೊಂಡಿದ್ದಾಳೆ. ಹನಿಟ್ರ್ಯಾಪ್ ಗೆ ಒಳಗಾಗಿದ್ದ ಹರೀಶ್ ಅವರನ್ನು ಈಗಾಗಲೇ ಸೇವೆಯಿಂದ ತೆಗೆದು ಹಾಕಲಾಗಿದ್ದು, ಈ ಪ್ರಕರಣದ ಬಗ್ಗೆ ಸಂಪೂರ್ಣ ತನಿಖೆ ನಡೆಸುವಂತೆ ದೂರು ದಾಖಲಿಸಲಾಗಿದೆ.
Bommai’s PA : Bommai’s PA who fell into the honeytrap trap








