ಮೈಸೂರು, ಸೆ.09: ಬುಕರ್ ಪ್ರಶಸ್ತಿ ವಿಜೇತ ಸಾಹಿತಿ ಬಾನು ಮುಸಷ್ತಾಕ್ (Banu Mushtaq) ಅವರು ಚಾಮುಂಡಿ ಬೆಟ್ಟದಲ್ಲಿ ಚಾಮುಂಡೇಶ್ವರಿ ಉತ್ಸವಮೂರ್ತಿಗೆ ಶುಭ ಲಗ್ನದಲ್ಲಿ ದೀಪ ಬೆಳಗಿ ಪುಷ್ಪಾರ್ಚನೆ ಮಾಡುವ ಮೂಲಕ ನಾಡಹಬ್ಬ ಮೈಸೂರು ದಸರಾ-2025 (Mysore Dasara 2025) ಅನ್ನು ಉದ್ಘಾಟಿಸಿದರು. ಈ ಮೂಲಕ 11 ದಿನಗಳ ಮೈಸೂರು ದಸರಾ ಕಾರ್ಯಕ್ರಮಗಳಿಗೆ ಚಾಲನೆ ದೊರಕಿತು.
ಹಸಿರು ಬಾರ್ಡರ್ ಇರುವ ಹಳದಿ ಮೈಸೂರು ರೇಷ್ಮೆ ಸೀರೆ, ತಲೆಗೆ ಮೈಸೂರು ಮಲ್ಲಿಗೆ ಮುಡಿದು ಆಗಮಿಸಿದ್ದ ಬಾನು ಮುಷ್ತಾಕ್ ಅವರು ಚಾಮುಂಡೇಶ್ವರಿ ದೇವಸ್ಥಾನದ ಗರ್ಭಗುಡಿಗೆ ತೆರಳಿ ತಾಯಿ ಚಾಮುಂಡಿಗೆ ನಮಸ್ಕರಿ, ಆರತಿ ಪಡೆದರು. ತಾಯಿ ಚಾಮುಂಡೇಶ್ವರಿಗೆ ಪೂಜೆ ವೇಳೆ ಬಾನು ಮುಷ್ತಾಕ್ ಅವರು ಭಾವುಕಾರಗಿದ್ದು, ಕಣ್ಣಂಚಲ್ಲಿ ಬಂದ ಕಣ್ಣೀರನ್ನು ಒರೆಸಿಕೊಂಡರು.
ದಸರಾ ಉದ್ಘಾಟಿಸಿದ ಬಾನು ಮುಷ್ತಾಕ್
#WATCH | Mysuru: Karnataka Chief Minister Siddaramaiah, Booker prize-winning author Banu Mushtaq, and other dignitaries inaugurated Dasara 2025 by performing a floral offering to Goddess Chamundeshwari on the silver chariot. pic.twitter.com/lDunOoKZuA
— ANI (@ANI) September 22, 2025
ಈ ಹಿಂದೆ ಬಾನು ಮುಷ್ತಾಕರಿಂದ ದಸರಾ ಉದ್ಘಾಟಿಸುವ ರಾಜ್ಯ ಸರ್ಕಾರಾದ ನಿರ್ಧಾರದ ವಿರುದ್ಧ ಹಲವರಿಂದ ವಿರೋಧ ವ್ಯಕ್ತವಾಗಿತ್ತು. ಅಲ್ಲದೇ ಬಾನು ಮುಷ್ತಾಕ್ ಆಯ್ಕೆಯನ್ನು ಪ್ರಶ್ನಿಸಿ ಮಾಜಿ ಸಂಸದ ಪ್ರತಾಪ್ ಸಿಂಹ್ ಹೈಕೋರ್ಟ್ ಮೆಟ್ಟಿಲೇರಿದ್ದರು. ಆದರೆ, ಹೈಕೋರ್ಟ್ ಪಿಐಎಲ್ ಅರ್ಜಿಯನ್ನು ವಜಾಗೊಳಿಸಿತ್ತು.
ಇದನ್ನೂ ಓದಿ: BJP ಅಧಿಕಾರದಲ್ಲಿ 24 ದೇವಾಲಯಗಳ ಪೂಜಾ ಶುಲ್ಕ ಹೆಚ್ಚಳ: ರೆಡ್ಡಿ
ಪ್ರಕರಣ ಸುಪ್ರೀಂ ಕೋರ್ಟ್ ಮೆಟ್ಟಿಲು ಹತ್ತಿತ್ತು. ಆದರೆ, ಸುಪ್ರಿಂ ಕೋರ್ಟ್ ಸಹ ಅರ್ಜಿ ವಜಾಗೊಳಿಸಿ ರಾಜ್ಯ ಸರ್ಕಾರದ ನಿರ್ಧಾರವನ್ನು ಎತ್ತಿ ಹಿಡಿದಿತ್ತು. ಇದೀಗ ಎಲ್ಲ ಅಡೆತಡೆಗಳನ್ನು ಎದುರಿಸಿ ಬಾನು ಮುಷ್ತಾಕ್ ನಾಡಹಬ್ಬ ಮೈಸೂರು ದಸರಾಗೆ ವಿದ್ಯುಕ್ತವಾಗಿ ಚಾಲನೆ ನೀಡಿದ್ದಾರೆ.
ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ








