ಬೆಂಗಳೂರು : ಸ್ಕೂಟರ್ ರೆಂಟಲ್ ಸ್ಟಾರ್ಟ್ ಆಪ್ ಬೌನ್ಸ್ ತನ್ನ ಸ್ಕೂಟರ್ ಗಳನ್ನು 800 ರೂಪಾಯಿಗಳಿಗೆ ಮಾರಾಟ ಮಾಡಲು ಮುಂದಾಗಿದೆ. ಸಂಸ್ಥೆಯನ್ನು ಮುಚ್ಚಲಾಗುತ್ತಿದೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಮಾಡಲಾಗುತ್ತಿದೆ. ಈ ವಿಚಾರವಾಗಿ ಟ್ವೀಟ್ ಮಾಡಿರುವ ಬೌನ್ಸ್ ನ ಸಹ ಸಂಸ್ಥಾಪಕ ವಿವೇಕಾನಂದ ಹಳ್ಳೆಕೆರೆ, ಬೌನ್ಸ್ ಸಂಸ್ಥೆ ಎಲೆಕ್ಟ್ರಿಕ್ ವಾಹನಗಳ ಮೇಲೆ ಹೆಚ್ಚಿನ ಹೂಡಿಕೆ ಮಾಡಲು ನಿರ್ಧರಿಸಿದೆ. ಆ ಕಾರಣಕ್ಕಾಗಿ ಬೆಂಗಳೂರು ಮತ್ತು ಹೈದರಬಾದ್ ನಲ್ಲಿರುವ ಬಳಕೆಯಾದ 1500 ದ್ವಿಚಕ್ರ ವಾಹನಗಳನ್ನು 800 ರೂಪಾಯಿಗಳಿಗೆ ಮಾರಾಟ ಮಾಡಲಾಗುತ್ತಿದೆ. ಸ್ಕೂಟರ್ ಶೇರಿಂಗ್ ಉದ್ಯಮದತ್ತ ಬೌನ್ಸ್ ಹೆಚ್ಚಿನ ಗಮನ ನೀಡುತ್ತಿದೆ. ಆದರೆ ಸಾಮಾಜಿಕ ಜಾಲತಾಣಗಳಲ್ಲಿ ಸಂಸ್ಥೆಯನ್ನೇ ಮುಚ್ಚುತ್ತಿದ್ದೇವೆ ಎಂಬ ಪ್ರಚಾರ ನಡೆಯುತ್ತಿದೆ. ಇದು ನಿಜವಲ್ಲ. ಜೊತೆಗೆ ಕೊರೋನಾ ಸಂದರ್ಭದಲ್ಲಿ ಬೌನ್ಸ್ ದ್ವಿಚಕ್ರ ವಾಹನಗಳ ಬಗ್ಗೆ ಗ್ರಾಹಕರಲ್ಲಿ ಆತಂಕ ಹೆಚ್ಚಾಗಿದೆ. ಆದ್ದರಿಂದ ವಾಹನಗಳಿಗೆ ಕ್ರಿಮಿನಾಶಕ ಸಿಂಪಡಿಸಲಾಗಿದೆ ಎಂದು ಸ್ಪಷ್ಟನೆ ನೀಡಿದ್ದಾರೆ.
ರಕ್ತಸಿಕ್ತ ಅವತಾರದಲ್ಲಿ ಪೃಥ್ವಿ ಅಂಬರ್…ಕುತೂಹಲ ಹೆಚ್ಚಿಸಿದ’ಚೌಕಿದಾರ್’ ಟೀಸರ್
ಕ್ಲಾಸ್ ಸಿನಿಮಾಗಳ ಮೂಲಕ ಲವರ್ ಬಾಯ್ ಆಗಿ ಕಾಣಿಸಿಕೊಳ್ಳುತ್ತಿದ್ದ ಪೃಥ್ವಿ ಅಂಬರ್ ಮೊದಲ ಬಾರಿಗೆ ರಗಡ್ ಗೆಟಪ್ ನಲ್ಲಿ ಕಾಣಿಸಿಕೊಂಡಿದ್ದಾರೆ. ರೋಸ್ ಹಿಡಿಯುತ್ತಿದ್ದ ಪೃಥ್ವಿ ಕೈಗೆ ಲಾಂಗ್...