ಹೊಳಿ ಆಡಿ ನದಿಗೆ ಸ್ನಾನಕ್ಕೆ ಹೋದ ಬಾಲಕರು ನೀರು ಪಾಲು
ಹಾವೇರಿ : ಹೊಳಿ ಆಚರಣೆ ನಂತರ ನದಿಗೆ ಸ್ನಾನಕ್ಕೆಂದು ತೆರಳಿದ್ದ ವೇಳೆ ಇಬ್ಬರು ಬಾಲಕರು ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದು, ಓರ್ವ ಬಾಲಕ ತೀವ್ರ ಅಸ್ವಸ್ಥಗೊಂಡಿರುವ ಘಟನೆ ಹಾವೇರಿಯ ನಾಗನೂರು ಗ್ರಾಮದಲ್ಲಿ ನಡೆದಿದೆ.
ಮಹೇಶ್ ಮುರಡಣ್ಣನವರ್(10), ವೀರೇಶ್ ಅಕ್ಕಿವಳ್ಳಿ(10) ಮೃತ ಬಾಲಕರಾಗಿದ್ದಾರೆ.
ಯೋಗೇಶ್ ಎಂಬ 7 ವರ್ಷದ ಬಾಲಕ ತೀವ್ರ ಅಸ್ವಸ್ಥಗೊಂಡಿದ್ದು, ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಇನ್ನು ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಹಾವೇರಿ ಗ್ರಾಮೀಣ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.