ಬೆಂಗಳೂರು: ಕೆಫೆಗೆ ನುಗ್ಗಿ ದುಷ್ಕರ್ಮಿಗಳು ಮ್ಯಾನೇಜರ್ ಮೇಲೆ ಹಲ್ಲೆ ಮಾಡಿ ಪರಾರಿಯಾಗಿರುವ ಘಟನೆಯೊಂದು ನಡೆದಿದೆ.
ಸಿಲಿಕಾನ್ ಸಿಟಿಯ ಕೆಂಗೇರಿಯ ಹೊಯ್ಸಳ ಸರ್ಕಲ್ ನಲ್ಲಿ ಈ ಘಟನೆ ನಡೆದಿದೆ. ಲಸ್ಸಿ ಕೆಫೆಗೆ ನುಗ್ಗಿ ಮ್ಯಾನೇಜರ್ ಮೇಲೆ ಮಾರಕಾಸ್ತ್ರಗಳಿಂದ ದುಷ್ಕರ್ಮಿಗಳು ಹಲ್ಲೆ (attack) ನಡೆಸಿದ್ದಾರೆ.
ಮ್ಯಾನೇಜರ್ ಇರ್ಷಾದ್ ಹಲ್ಲೆಗೆ ಒಳಗಾದ ವ್ಯಕ್ತಿ ಎನ್ನಲಾಗಿದೆ. ಕೆಫೆಗೆ ನುಗ್ಗಿದ್ದ ಇಬ್ಬರು ದುರ್ಷರ್ಮಿಗಳು ಕೃತ್ಯ ಎಸಗಿದ್ದಾರೆ. ಈ ಘಟನೆ ಕಳೆದ ಮೂರು ದಿನಗಳ ಹಿಂದೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಗಂಭೀರವಾಗಿ ಗಾಯಗೊಂಡಿರುವ ಇರ್ಷಾದ್ ನನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಕೆಂಗೇರಿ ಠಾಣೆಯಲ್ಲಿ ಆರೋಪಿಗಳ ವಿರುದ್ಧ ಪ್ರಕರಣ ದಾಖಲಾಗಿದ್ದು, ಆರೋಪಿಗಳಿಗಾಗಿ ಪೊಲೀಸರು ಬಲೆ ಬೀಸಿದ್ದಾರೆ.