ದ್ವಿತೀಯ PUC ಪರೀಕ್ಷೆಯ ಫಲಿತಾಂಶ ಕುರಿತು ಇದ್ದ ಗೊಂದಲಕ್ಕೆ ಕೊನೆಗೂ ತೆರೆ ಬಿದ್ದಿದೆ. 2025–26ನೇ ಸಾಲಿನ ದ್ವಿತೀಯ PUC ಫಲಿತಾಂಶವು ಏಪ್ರಿಲ್ 9ರಂದು ಅಧಿಕೃತವಾಗಿ ಪ್ರಕಟವಾಗಲಿದೆ ಎಂದು ಕರ್ನಾಟಕ ಶಾಲಾ ಪರೀಕ್ಷಾ ಮೌಲ್ಯ ನಿರ್ಣಯ ಮಂಡಳಿ ಅಧಿಕಾರಿಗಳು ತಿಳಿಸಿದ್ದಾರೆ.
ಅಂದು ಬೆಳಗ್ಗೆ ಮಂಡಳಿ ಸುದ್ದಿಗೋಷ್ಠಿ ನಡೆಸಿ, ಬಳಿಕ ಅಧಿಕೃತ ವೆಬ್‌ಸೈಟ್‌ನಲ್ಲಿ ಫಲಿತಾಂಶ ಪ್ರಕಟಿಸಲಾಗುತ್ತದೆ. ವಿದ್ಯಾರ್ಥಿಗಳು ತಮ್ಮ ಫಲಿತಾಂಶವನ್ನು ಆನ್‌ಲೈನ್ ಮೂಲಕ ಪರಿಶೀಲಿಸಬಹುದು.
ಈ ವರ್ಷ ಒಟ್ಟು 1,217 ಪರೀಕ್ಷಾ ಕೇಂದ್ರಗಳಲ್ಲಿ ಫೆಬ್ರವರಿ 28ರಿಂದ ಮಾರ್ಚ್ 17ರವರೆಗೆ ದ್ವಿತೀಯ PUC ಪರೀಕ್ಷೆಗಳು ಯಶಸ್ವಿಯಾಗಿ ನಡೆದಿವೆ. ರಾಜ್ಯದಾದ್ಯಂತ ಲಕ್ಷಾಂತರ ವಿದ್ಯಾರ್ಥಿಗಳು ಈ ಪರೀಕ್ಷೆಯಲ್ಲಿ ಭಾಗವಹಿಸಿದ್ದರು.
ಫಲಿತಾಂಶದ ನಿರೀಕ್ಷೆಯಲ್ಲಿ ಇರುವ ವಿದ್ಯಾರ್ಥಿಗಳು ಹಾಗೂ ಪೋಷಕರಿಗೆ ಈ ಘೋಷಣೆ ಮಹತ್ವದ ಸುದ್ದಿ ಆಗಿದೆ.







