ದಶಕದ ಬಳಿಕ ಬಾರ್ಡರ್-ಗವಾಸ್ಕರ್ ಸರಣಿ ಸೋತ ಭಾರತವು WTC ಫೈನಲ್ನಿಂದಲೂ ಔಟ್
ಸಿಡ್ನಿಯಲ್ಲಿ ನಡೆದ ಪಂದ್ಯದಲ್ಲಿ ಭಾರತವನ್ನು ಆರು ವಿಕೆಟ್ಗಳಿಂದ ಸೋಲಿಸಿದ ಆಸ್ಟ್ರೇಲಿಯಾ ತಂಡವು 10 ವರ್ಷಗಳ ನಂತರ ಬಾರ್ಡರ್ ಗವಾಸ್ಕರ್ ಟ್ರೋಫಿ ಹಾಗೂ ಸರಣಿಯನ್ನು ಗೆದ್ದಿದೆ. ಇದರ ಜೊತೆಗೆ ಆಸ್ಟ್ರೇಲಿಯಾ ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ ಫೈನಲ್ಗೆ ತಲುಪಿದ್ದು, ದಕ್ಷಿಣ ಆಫ್ರಿಕಾ ಈಗಾಗಲೇ ಅರ್ಹತೆ ಪಡೆದ ಮೊದಲ ತಂಡವಾಗಿರುತ್ತದೆ. ಜೂನ್ನಲ್ಲಿ ಲಾರ್ಡ್ಸ್ನ ನ ಐತಿಹಾಸಿಕ ಮೈದಾನದಲ್ಲಿ ಆಸ್ಟ್ರೇಲಿಯಾ ಮತ್ತು ದಕ್ಷಿಣ ಆಫ್ರಿಕಾ ತಂಡಗಳು WTCಯ ಪ್ರಶಸ್ತಿಗಾಗಿ ಸೆಣೆಸಾಟ ನಡೆಸಲಿವೆ.