ರಾಜ್ಯದಲ್ಲಿ ವಿಧಾನಸಭಾ ಚುನಾವಣೆಗೆ ಮತದಾನ ಆರಂಭವಾಗಿದೆ. ಹೀಗಾಗಿ ಪ್ರತಿಯೊಬ್ಬ ಪ್ರಜೆಯೂ ಮತದಾನದಲ್ಲಿ ಭಾಗಿಯಾಗುವಂತೆ ಪ್ರೇರೇಪಿಸಲಾಗಿತ್ತು. ಈಗಾಗಲೇ ಎಲ್ಲೆಡೆ ಶಾಂತಿಯಿಂದ ಮತದಾನವಾಗುತ್ತಿದೆ.
ಇಂದು ಬೆಳಿಗ್ಗೆ 7 ಗಂಟೆಯಿಂದ ಮತದಾನ ಆರಂಭವಾಗಿದ್ದು, ನಟಿ ಅಮೂಲ್ಯ (Amulya) ಅವರು ಮತದಾನ ಮಾಡಿದ್ದಾರೆ. ಬೆಂಗಳೂರಿನ ಆರ್ಆರ್ ನಗರದಲ್ಲಿ ಅವರು ಮತ ಚಲಾಯಿಸಿದ್ದಾರೆ. ನಂತರ ಮಾತನಾಡಿದ ಅವರು, ಎಲ್ಲರೂ ಮತದಾನ ಮಾಡುವಂತೆ ಮನವಿ ಮಾಡಿದ್ದಾರೆ. ಕುಟುಂಬ ಸಮೇತರಾಗಿ ಬಂದು ಅವರು ಹಕ್ಕು ಚಲಾಯಿಸಿದ್ದಾರೆ.








