ಬೆಂಗಳೂರು : ಬೈಕ್ ಗೆ ಲಾರಿ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲಿಯೇ ಸಾವನ್ನಪ್ಪಿರುವ ಘಟನೆ ಬನಗರದ ಮಡಿವಾಳ ಸಮೀಪದ ಮೈಕೋಬಂಡೆ ಹತ್ತಿರ ನಡೆದಿದೆ.
ಕಂಟೇನರ್ ಲಾರಿಯೊಂದು ಬೈಕ್ಗೆ ಡಿಕ್ಕಿ ಹೊಡೆದಿದ್ದರಿಂದಾಗಿ ಈ ಘಟನೆ ನಡೆದಿದೆ. ಬೈಕ್ ಗೆ ಲಾರಿ ಡಿಕ್ಕಿ ಹೊಡೆಯುತ್ತಿದ್ದಂತೆ ಲಾರಿ ಚಾಲಕ ಸ್ಥಳದಿಂದ ಪರಾರಿಯಾಗಿದ್ದಾನೆ. ಲಾರಿ ಡಿಕ್ಕಿ ಹೊಡೆದ ರಭಸಕ್ಕೆ ಗಾಯಗೊಂಡ ಸವಾರನು ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾನೆ.
ಮೃತನ ಹೆಸರು ಹಾಗೂ ವಿಳಾಸ ತಿಳಿದು ಬಂದಿಲ್ಲ. ಆಡುಗೋಡಿ ಸಂಚಾರ ಪೊಲೀಸ್(Adugodi Traffic Police) ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಲಾರಿಗಾಗಿ ಸಿಸಿಟಿವಿ ಪರಿಶೀಲನೆ ನಡೆಸಲಾಗುತ್ತಿದೆ.