ಗದಗ : ಜಿಲ್ಲೆಯ ಶಿರಹಟ್ಟಿ ವಿಧಾನಸಭೆಯಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಪ್ರಚಾರಕ್ಕೆಂದು ತೆರಳಿದ್ದ ಸಂದರ್ಭದಲ್ಲಿ ಅವರನ್ನು ನೋಡಲು ಅಭಿಮಾನಿಗಳು ಮುಗಿ ಬಿದ್ದಿದ್ದರು. ಈ ಸಂದರ್ಭದಲ್ಲಿ ಪೊಲೀಸರು ಲಾಠಿ ರುಚಿ ತೋರಿಸಿದ್ದಾರೆ.
ಶಿರಹಟ್ಟಿ ವಿಧಾನಸಭಾ ಕ್ಷೇತ್ರದ ಬೆಳ್ಳಟ್ಟಿ ಗ್ರಾಮಕ್ಕೆ ಆಗಮಿಸಿದ್ದ ಸಿದ್ದರಾಮಯ್ಯ ಅವರನ್ನು ನೋಡಲು ಹೆಚ್ಚಿನ ಸಂಖ್ಯೆಯಲ್ಲಿ ಅಭಿಮಾನಿಗಳು ಮುಗಿಬಿದ್ದಿದ್ದರು. ಈ ಸಂದರ್ಭದಲ್ಲಿ ಸಿದ್ದರಾಮಯ್ಯ ಅವರು ಹೆಲಿಕಾಪ್ಟರ್ ಮೂಲಕ ಆಗಮಿಸಿದ್ದರು. ಅವರನ್ನು ನೋಡಲು ಸಾಕಷ್ಟು ಸಂಖ್ಯೆಯಲ್ಲಿ ಅಭಿಮಾನಿಗಳು ನೆರದಿದ್ದರು. ಮಾಜಿ ಸಿಎಂ ಹೆಲಿಕಾಪ್ಟರ್ನಿಂದ ಕೆಳಗಿಳಿಯುತ್ತಿದ್ದಂತೆ ಜನರು ಹಾಗೂ ಅಭಿಮಾನಿಗಳು ಮುಗಿಬಿದ್ದಿದ್ದಾರೆ.
ಜನರು ಹಾಗೂ ಅಭಿಮಾನಿಗಳನ್ನು ನಿಯಂತ್ರಿಸಲು ಪೊಲೀಸರು ಹರಸಾಹಸ ಪಟ್ಟಿದ್ದರು. ಕೊನೆಗೆ ಲಘು ಲಾಠಿ ಪ್ರಹಾರ ನಡೆಸುವ ಮೂಲಕ ಪೊಲೀಸರು ಜನರನ್ನು ಚದುರಿಸಿದ್ದಾರೆ. ಸಿಆರ್ಪಿಎಫ್ ಹಾಗೂ ಸ್ಥಳೀಯ ಪೊಲೀಸರು ಲಾಠಿ ಚಾರ್ಚ್ ನಡೆಸಿದ್ದಾರೆ.