ಸಾಮಾಜಿಕ ಕಾರ್ಯಕರ್ತೆ ತೀಸ್ತಾ ಸೆಟಲ್ವಾಡ್‌ಗೆ ಸುಪ್ರೀಂ ಕೋರ್ಟ್ ಮಧ್ಯಂತರ ಜಾಮೀನು
2002 ಗೋಧ್ರಾ ಹತ್ಯಾಕಾಂಡ ಸಂದರ್ಭದಲ್ಲಿ ಅಂದಿನ ಗುಜರಾತ್ ಮುಖ್ಯಮಂತ್ರಿ ನರೇಂದ್ರ ಮೋದಿ ಸೇರಿದಂತೆ ಉನ್ನತ ಅಧಿಕಾರಿಗಳನ್ನು ಬಂಧಿಸಲು ನಕಲಿ ದಾಖಲೆಗಳನ್ನು ಸೃಷ್ಟಿಸಿದ ಆರೋಪದ ಮೇಲೆ ಗುಜರಾತ್ ಪೊಲೀಸರಿಂದ ಬಂಧಿಸಲ್ಪಟ್ಟಿದ್ದ ಸಾಮಾಜಿಕ ಕಾರ್ಯಕರ್ತೆ ತೀಸ್ತಾ ಸೆಟಲ್ವಾಡ್‌ಗೆ ಸುಪ್ರೀಂ ಕೋರ್ಟ್ ಮಧ್ಯಂತರ ಜಾಮೀನು ನೀಡಿದೆ.
ಜಾಮೀನು ಅರ್ಜಿಯನ್ನು ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಯು.ಯು.ಲಲಿತ್, ನ್ಯಾಯಮೂರ್ತಿ ರವೀಂದ್ರ ಭಟ್ ಮತ್ತು ನ್ಯಾಯಮೂರ್ತಿ ಸುಧಾಂಶು ಧುಲಿಯಾ ನೇತೃತ್ವದ ಪೀಠ, ತೀಸ್ತಾ ಸೆಟಲ್ವಾಡ್ ಪಾಸ್‌ಪೋರ್ಟ್ ನ್ನ ಹೈಕೊರ್ಟ್ ಗೆ ಸಲ್ಲಿಸಬೇಕು ಅಲ್ಲದೆ, ತನಿಖೆಗೆ ಸಂಪೂರ್ಣ ಸಹಕಾರ ನೀಡುವಂತೆ ಸುಪ್ರೀಂ ಕೋರ್ಟ್ ಕೂಡ ಆದೇಶಿಸಿದೆ.
ಅದೇ ಸಮಯದಲ್ಲಿ, ಸುಪ್ರೀಂ ಕೋರ್ಟ್ ಗುಜರಾತ್ ಹೈಕೋರ್ಟ್ ಬಗ್ಗೆ ಮತ್ತೊಂದು ಸೂಚನೆ ನೀಡಿದ್ದು, ಯಾವುದೇ ಒತ್ತಡಕ್ಕೆ ಮಣಿಯದೆ ಮುಕ್ತವಾಗಿ ನಿರ್ಧಾರ ತೆಗೆದುಕೊಳ್ಳಬಹುದು ಎಂದು ಹೇಳಿದೆ.