Jahangirpuri: ಪ್ರಕರಣದ ತನಿಕೆ ನಡೆಸುತ್ತಿರುವ ಸಮಯದಲ್ಲಿ ಪೊಲೀಸರ ಮೇಲೆ ಕಲ್ಲು ತೂರಾಟ
1 min read
ಪ್ರಕರಣದ ತನಿಕೆ ನಡೆಸುತ್ತಿರುವ ಸಮಯದಲ್ಲಿ ಪೊಲೀಸರ ಮೇಲೆ ಕಲ್ಲು ತೂರಾಟ
ನವದೆಹಲಿ : ಜಹಾಂಗಿರ್ ಪುರಿ ಯಲ್ಲಿ ನಡೆದ ಘಟನೆ ಸಂಬಂಧ, ಕೃತ್ಯ ಎಸಗಿದ ಆರೋಪಿ ಮನೆಗೆ ಇಂದು ಪೊಲೀಸರ ತಂಡ ತೆರಳಿ, ವಿಚಾರಣೆ ನಡೆಸುತ್ತಿದ್ದ ಸಂದರ್ಭದಲ್ಲಿ ಅವರ ಮೇಲೆ ದುಷ್ಕರ್ಮಿಗಳು ಕಲ್ಲು ತೂರಾಟ ನಡೆಸಿದ್ದಾರೆ
ಜಹಾಂಗಿರ್‌ಪುರಿ ಪ್ರದೇಶದಲ್ಲಿ ಹನುಮಾನ್ ಜನ್ಮೋತ್ಸವ ಮೆರವಣಿಗೆಯ ಸಮಯದಲ್ಲಿ ಎರಡು ಗುಂಪುಗಳ ಮಧ್ಯೆ ಹಿಂಸಾಚಾರ ನಡೆದಿತ್ತು. ಈ ಹಿಂಸಾಚಾರದ ಸಮಯದಲ್ಲಿ ಕಲ್ಲು ತೂರಾಟ ನಡೆದಿದ್ದು, ಪರಿಣಾಮ ಕೆಲ ಪೊಲೀಸರು ಗಾಯಗೊಂಡಿದ್ದು, ವಾಹನಗಳು ಜಖಂಗೊಂಡಿದ್ದವು. ಈ ಸಂಬಂಧ ಪೊಲೀಸ್ ಇಲಾಖೆ ಪ್ರಕರಣದ ತನಿಖೆ ನಡೆಸುತ್ತಿರುವ ಸಮಯದಲ್ಲಿ ಘಟನೆ ಸಂಭವಿಸಿದೆ.
Delhi | Brick thrown at Delhi Police Crime Branch team at C-block in Jahangirpuri where it had gone for investigation
Police and RAF are deployed at the spot. pic.twitter.com/9BJWIzd8Lb
— ANI (@ANI) April 18, 2022
ಇನ್ನು ಇಡೀ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾತನಾಡಿರುವ ದೆಹಲಿ ಪೊಲೀಸ್ ಕಮಿಷನರ್ ರಾಕೇಶ್ ಆಸ್ತಾನ, ಹಿಂಸಾಚಾರಕ್ಕೆ ಸಂಬಂಧಿಸಿದಂತೆ 23 ಜನರ ಬಂಧನ ಮಾಡಲಾಗಿದೆ. ಸಣ್ಣ ವಿಚಾರಕ್ಕಾಗಿ ಎರಡು ಗುಂಪುಗಳ ಮಧ್ಯೆ ಮಾತಿನ ಚಕಮಕಿ ಆರಂಭಗೊಂಡಿದ್ದು, ಸಂಪೂರ್ಣ ದೃಶ್ಯಾವಳಿ ಸಿಸಿಟಿವಿಯಲ್ಲಿ ಸೆರೆಯಾಗಿವೆ. ಅದರ ಆಧಾರದ ಮೇಲೆ ಆರೋಪಿಗಳ ಬಂಧನ ಮಾಡಲಾಗಿದೆ ಎಂದರು.